LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನದಲ್ಲಿ ಮಳೆಯಬ್ಬರ – ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ

Advertisement

ಹಾಸನ: ಜಿಲ್ಲೆಯಲ್ಲಿ ವರಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಬಾರಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಇತ್ತ ಪಕ್ಕದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ.

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಸದ್ಯ 2898.40 ಅಡಿಗಳಷ್ಟಿರುವ ನೀರಿದೆ. ಕಾವೇರಿಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಹೇಮಾವತಿ ಜಲಾಶಯವೂ ಒಂದಾಗಿದೆ. 

ಬೇಲೂರು ತಾಲೂಕಿನ ಶಾಲೆಗಳಿಗೆ ರಜೆ:
ಹಾಸನ ಜಿಲ್ಲೆಯ, ಬೇಲೂರು, ತಾಲೂಕಿನಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುತ್ತಿದ್ದು, ಮುಂಜಾಗ್ರತೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಲೂರು ತಾಲೂಕಿನ, ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು, ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶಿದ್ದಾರೆ. ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಮಂಗಳವಾರ, ಇಂದು ರಜೆ ನೀಡಿದ್ದರಿಂದ ಶನಿವಾರ ಪೂರ್ತಿ ದಿನ ಶಾಲೆ ನಡೆಸುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
E20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ ಸವಾಲುವೈದ್ಯರ ಮೇಲೆ ಹಲ್ಲೆ – ಶಿವಸೇನೆ ಕಾರ್ಪೊರೇಟರ್ ಸೇರಿ ಆರು ಮಂದಿ ವಿರುದ್ಧ FIR, ಮೂವರ ಬಂಧನ11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿಸಿ.ಟಿ. ರವಿ ಮೊದಲು ವಾಯ್ಸ್ ಸ್ಯಾಂಪಲ್ ಕೊಟ್ಟು ಆಮೇಲೆ ಮಾತನಾಡಲಿ: ಪ್ರಿಯಾಂಕ್ ತಿರುಗೇಟುವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಪೋಷಕರಿಂದ ವಾರ್ಡನ್‌ಗೆ ಥಳಿತಮದ್ವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲನೆ; ಕ್ರಮದ ಭರವಸೆ ನೀಡಿದ ಪ್ರಿಯಾಂಕ್ ಖರ್ಗೆಉಗ್ರ ಸಂಘಟನೆಗಳ ಜೊತೆ ನಂಟು – ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ – ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ