LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು

Advertisement
Advertisement

ಹಾಸನ: ಮಲೆನಾಡಿನ ಮಡಿಲು ಹಾಸನ ಜಿಲ್ಲೆಯಲ್ಲಿಯೇ ಈ ಬಾರಿ ಮಳೆಯ ಕೊರತೆ ಆಗಿದ್ದು, ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಿದ್ದು, ಮಳೆ ಬಂದರೆ ಸಾಕಪ್ಪ ಎನ್ನುವಂತಾಗಿದೆ. ಜಿಲ್ಲೆಯ ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು ತುಂಬಿಸುತ್ತಿತ್ತು. ಆದರೆ ಈ ವರ್ಷ ಮುಂಗಾರು ಮಳೆಯ ತೀವ್ರ ಕೊರತೆ ಬರದ ಛಾಯೆ ಮೂಡಿಸಿದೆ.

 

37 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ಈಗ ಕೇವಲ 14 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಹೀಗಿದ್ದರೂ ಇದರಲ್ಲಿ ಬಳಕೆಗೆ ಯೋಗ್ಯ ನೀರು ಕೇವಲ 10 ಟಿಎಂಸಿ ಮಾತ್ರವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ ಬರೊಬ್ಬರಿ 25 ಟಿಎಂಸಿ ನೀರಿತ್ತು 21 ಟಿಎಂಸಿ ನೀರು ಬಳಕೆಗೆ ಸಿಗುವಂತಿತ್ತು. ಹಾಸನ ಜಿಲ್ಲೆಯ ಹಲವು ತಾಲೂಕುಗಳಿಗೆ ಕುಡಿಯುವ ನೀರಿನ ಮೂಲ ಇದೇ ಜಲಾಶಯವಾಗಿದೆ. ಜೊತೆಗೆ ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಯ ಲಕ್ಷಾಂತರ ರೈತರ ತುತ್ತಿನ ಚೀಲಕ್ಕೆ ಆಸರೆಯಾಗಿರುವ ಹೇಮಾವತಿ ಜಲಾಶಯ ಈ ವರ್ಷ ಖಾಲಿ ಖಾಲಿಯಾಗಿದ್ದು, ಪರಿಸ್ಥಿತಿ ಹೀಗೆಯೇ ಇದ್ದರೆ ಮುಂದೇನೆಂಬ ಪ್ರಶ್ನೆ ಉದ್ಭವಿಸಿದೆ.

ಒಂದೆಡೆ ಮಳೆ ಕೈಕೊಟ್ಟಿದ್ದರೆ ಇತ್ತ ಡ್ಯಾಂ ಕೂಡ ಬರಿದಾಗುತ್ತಿರುವ ಕಾರಣ ರೈತರು ಕಂಗಾಲಾಗಿದ್ದಾರೆ. ಹದಿನೈದು ದಿನಗಳ ಹಿಂದೆ ಸುರಿದ ಅಲ್ಪ ಮಳೆಯನ್ನೇ ನಂಬಿ ಬಿತ್ತನೆಮಾಡಿದ್ದ ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ಬೋರ್​​ವೆಲ್​​ಗಳತ್ತ ಮುಖ ಮಾಡಿದ್ದರೂ, ಬಿರು ಬೇಸಿಗೆಯನ್ನೂ ನಾಚಿಸುವಂತೆ ನೆತ್ತಿ ಸುಡುತ್ತಿರುವ ಸೂರ್ಯನ ತಾಪಕ್ಕೆ ಬೆಳೆ ನೆಲಕಚ್ಚುತ್ತಿದೆ. ಕಳೆದ ವರ್ಷ ಅತಿಯಾದ ಮಳೆ ಸುರಿದು ಬೆಳೆ ನೀರುಪಾಲಾಗಿದ್ದರೆ, ಈ ವರ್ಷ ಮಳೆಯೇ ಇಲ್ಲದಿರೋದು ಸಾಲಶೂಲ ಮಾಡಿ ಬಿತ್ತನೆ ಮಾಡಿದ್ದ ರೈತರ ನಿದ್ದೆ ಕಸಿದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಡದಿ ಟೌನ್‌ಶಿಪ್‌ ಜಟಾಪಟಿ – ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು: ವಿಜಯೇಂದ್ರ ಆಗ್ರಹಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ: ಹೆಚ್‌ಡಿಕೆ ಕಿಡಿಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆಕಾಂಗ್ರೆಸ್, ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್‌ಶಿಪ್ ಜಟಾಪಟಿ – ಪೋಸ್ಟರ್ ವಾರ್ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ – 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್‌ ರಾಜ್‌ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿಸುಳ್ಳು ಸುದ್ದಿ ಹರಡಿದವರ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣಇಡೀ ಸಮಾಜವಾದಿ ಪಕ್ಷ ಬಿಜೆಪಿ ಜೊತೆ ಸೇರಲು ಕಾದು ಕುಳಿತಿದೆ – ಓಂ ಪ್ರಕಾಶ್ ರಾಜ್‌ಭರ್