LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಮಾರಕ: ಡಾ.ಕರ್ನಲ್ ದಯಾನಂದ

ಬೆಳಗಾವಿ: ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆಯನ್ನುಂಟು ಮಾಡುವ ನಿಧಾನ ಕೊಲೆಗಾರನಾಗಿದ್ದು, ಹೃದಯ, ಮೆದುಳು, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿನ ಜನರು ಹೆಚ್ಚಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಜನರು ಚಿಕಿತ್ಸೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದವರು ತಮಗೆ ರಕ್ತದೊತ್ತಡ ಇದೆ ಎಂಬುದನ್ನೇ ಅರಿತುಕೊಂಡಿಲ್ಲ ಎಂದು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಹೇಳಿದರು.

ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಅಂಗವಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವದು ಅತ್ಯಂತ ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಕೆಲಸದೊತ್ತಡದಿಂದ ರಕ್ತದೊತ್ತಡವು ಕಂಡು ಬರುತ್ತಿದೆ. ಆದ್ದರಿಂದ ಸರಿಯಾದ ಸಮಯಕ್ಕೆ ತಪಾಸಣೆಗೊಳ್ಪಡದಿದ್ದರೆ, ತೀವ್ರತರವಾದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇದು ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಮುಂಜಾಗೃತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವಿಭಾಗ ಮುಖ್ಯಸ್ಥರಾದ ಡಾ. ಸಂಜಯ ಪೋರವಾಲ ಅವರು ಮಾತನಾಡಿ, ಅದಿಕ ರಕ್ತದೊತ್ತಡವು ಯಾವುದೇ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ ಇದು ಹೃದಯಾಘಾತ, ಪಾರ್ಶವಾಯು, ಮೂತ್ರಪಿಂಡ ಖಾಯಿಲೆ ಹಾಗೂ ಅಕಾಲಿಕ ಮರಣದ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಶೀಘ್ರದಲ್ಲಿಯೇ ಅದನ್ನು ಪತ್ತೆಹಚ್ಚಿ ನಿಯಮಿತ ಚಿಕಿತ್ಸೆ ಹಾಗೂ ಆಹಾರ ಕ್ರಮಗಳನ್ನು ಅನುಸರಿಸಬೇಕು. ಅಧಿಕ ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯಲು ಜನ ಹಿಂಜರಿಯುತ್ತಿದ್ದಾರೆ. ಆದರೆ ಅವರಿಗೆ ಆರೋಗ್ಯ ಸಮಸ್ಯೆ ಕಂಡು ಬರುವ ಅಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ ರಕ್ತದೊತ್ತಡವನ್ನು ನಿರ್ಲಕ್ಷಿಸಿದರೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಹಿರಿಯ ಹೃದ್ರೋಗ ತಜ್ಞವೈದ್ಯರಾದ ಡಾ. ಸುರೇಶ ಪಟ್ಟೇದ, ಡಾ. ಸಮೀರ ಅಂಬರ, ಡಾ. ವಿಜಯಾನಂದ ಮೆಟಗುಡಮಠ, ಡಾ. ಪ್ರಸಾದ ಎಂ. ಆರ್.‌ ಡಾ. ಸುಹಾಸಿನಿ ಅಗರ್ಥಾ, ಡಾ. ವಿಶ್ವನಾಥ ಹೆಸರೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಅಭಿವೃದ್ದಿ ನಿಗಮ ನೇಮಕಾತಿಗೆ ಅರ್ಜಿ ಆಹ್ವಾನ – ಕೆಇಎಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಮರುಪರಿಶೀಲಿಸಿ – ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ಆದೇಶ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ, ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ!ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರಗೋವನ್ನು ರಾಷ್ಟ್ರೀಯ ಪ್ರಾಣಿ ಅಂತ ಘೋಷಿಸಿ – ಕೇಂದ್ರಕ್ಕೆ ಬಾಬರಿ ಪ್ರಕರಣದ ವಾದಿ ಇಕ್ಬಾಲ್ ಅನ್ಸಾರಿ ಮನವಿಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!ವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ