ಬೆಂಗಳೂರು: SC & ST ಮೀಸಲಾತಿ ಹೆಚ್ಚಿಸಿದ್ದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಶೇ.50 ರಿಂದ ಶೇ.56 ಕ್ಕೆ ಮೀಸಲಾತಿ ಪ್ರಮಾಣವನ್ನು ಸರ್ಕಾರ ಹೆಚ್ಚಿಸಿತ್ತು. ಸರ್ಕಾರ ಹೆಚ್ಚುವರಿ ಮೀಸಲಾತಿ ಕೊಟ್ಟಿದ್ದನ್ನ ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿಶ್ರಾ ಎಂಬವರು ಹೈಕೋರ್ಟ್‌ನಲ್ಲಿ PIL ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾ. ಕೆ.ಎಸ್.ಹೇಮಲೇಖಾ ಪೀಠ ಎಸ್‌ಸಿ-ಎಸ್ಟಿಗೆ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿಯನ್ನ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50 ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ- 2022 ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

