LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ, 8 ಮಂದಿಗೆ ಗಾಯ

Advertisement
Advertisement
Advertisement

ಮಡಿಕೇರಿ: ಮಡಿಕೇರಿ-ಮಂಗಳೂರು  ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಟಿಟಿ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ ಆರು ಮಂದಿ ಹಾಗೂ ಲಾರಿಯಲ್ಲಿದ್ದ ಇಬ್ಬರು ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ.

ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿನತ್ತ ತೆರಳುತ್ತಿದ್ದರು.

ಟಿಟಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕೆಲವರು ಟೀ ಕುಡಿಯಲು ತೆರಳಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ವಾಹನದ ಮೇಲೆ ಮಗುಚಿ ಬಿದ್ದಿದೆ ಎನ್ನಲಾಗಿದೆ. ಪರಿಣಾಮ ಟಿಟಿ ವಾಹನದಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನು ಲಾರಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಅದೃಷ್ಟವಶಾತ್ ಟಿಟಿ ವಾಹನದಲ್ಲಿದ್ದ ಇತರ ಪ್ರವಾಸಿಗರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲುರಾಕಿಂಗ್ ಸ್ಟಾರ್ ಅಬ್ಬರ – ಮೊದಲ ದಿನವೇ 140 ಕೋಟಿ ಬಾಚಿದ ಟಾಕ್ಸಿಕ್ಮನೆಯಲ್ಲೇ 50 ಲಕ್ಷ ಕದ್ದ ಮಗ – ಗರ್ಲ್‌ಫ್ರೆಂಡ್‌ಗೆ 5 ಲಕ್ಷ ಖರ್ಚು, 1.5 ಲಕ್ಷದ iPhone ಗಿಫ್ಟ್!Bro Wait, ಭಾರತ್ ಮಾತಾ ಕಿ ಜೈ ಶುರು ಮಾಡೋಣ – ರಾಗಾ ಪಿತೃಪ್ರಧಾನ ವ್ಯವಸ್ಥೆ ಹೇಳಿಕೆಗೆ ಕಂಗನಾ ತಿರುಗೇಟುನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ, ಹಿಜಾಬ್‌ ಆದೇಶ ಇಸ್ಲಾಂ ಮೇಲಿನ ನೇರ ದಾಳಿ – ಹೈಕೋರ್ಟ್ ತೀರ್ಪಿಗೆ ಓವೈಸಿ ಕಿಡಿಟ್ರಕ್‌ಗೆ ಕಾರು ಡಿಕ್ಕಿ – 23 ವರ್ಷದ ಯೂಟ್ಯೂಬರ್, ತಾಯಿ ಸಾವುನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ ಸದ್ಯಕ್ಕೆ ರಾಜೀನಾಮೆ ವಿಚಾರ ಇಲ್ಲ: ಸಿಎಂತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲುಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು: ನಿಖಿಲ್ ಕುಮಾರಸ್ವಾಮಿನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು