LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್‌ ಹಾಯಿಸಿ ಎರಡು ಜಿಂಕೆಗಳ ಬೇಟೆ – ಮೂವರು ಆರೋಪಿಗಳು ಅರೆಸ್ಟ್‌

Advertisement
Advertisement
Advertisement

ಶಿವಮೊಗ್ಗ: ಸಾಗರ  ತಾಲೂಕಿನ ಶರಾವತಿ ವನ್ಯಜೀವಿ ವಲಯದಲ್ಲಿ  ವಿದ್ಯುತ್‌ ತಂತಿ ಹಾಯಿಸಿ ಎರಡು ಜಿಂಕೆ ಬೇಟೆಯಾಡಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ನಾಗವಳ್ಳಿ ಗ್ರಾಮದ ನಿವಾಸಿಗಳಾದ ಬಾನು, ಶಿವು ಹಾಗೂ ಮಹೇಶ್ ಬಂಧಿತ ಆರೋಪಿಗಳು. ಈ ಮೂವರು ಪ್ರಕರಣದ ಎ-2, ಎ-5 ಹಾಗೂ ಎ-6 ಆರೋಪಿಗಳಾಗಿದ್ದಾರೆ. ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. 

ಎ-1 ಷಾಜಿ, ಎ-3 ರಾಮ ಹಾಗೂ ಎ-4 ಶ್ರೀಧರ್ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಜಿಂಕೆ ಬೇಟೆಯಾಡಿ, ಮಾಂಸ ಮಾಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೋಗಾರಿನ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಷಾಜಿ ಜಮೀನಿನಲ್ಲಿ ವಿದ್ಯುತ್ ಹರಿಸಿದ್ದರು. ವಿದ್ಯುತ್‌ ತಗುಲಿ ಎರಡು ಗಂಡು ಜಿಂಕೆಗಳು ಸಾವನ್ನಪ್ಪಿದ್ದವು. ಇವುಗಳನ್ನು ಆರೋಪಿಗಳು ಸಾಂಬರು ಕೂಡ ಮಾಡಿದ್ದರು. ಜಿಂಕೆಗಳ ಚರ್ಮ, ಮೂಳೆಯನ್ನು ಮಣ್ಣಿನಡಿ ಹೂತು ಹಾಕಿದ್ದರು.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿ ಪ್ರಕರಣ ದಾಖಲಾಗಿದೆ. ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ