LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಅಡ್ಡ ಮತದಾನ ಮಾಡಿಲ್ಲ, ಮುಜುಗರ ಉಂಟು ಮಾಡಬೇಡಿ: ಚಂದ್ರು ಲಮಾಣಿ

Advertisement

ಗದಗ: ವಿಧಾನ ಪರಿಷತ್ ಚುನಾವಣೆಯಲ್ಲಿ  ಅಡ್ಡ ಮತದಾನ  ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಅವರು ಮಾಧ್ಯಮಗಳ ಎದುರು ಸ್ಪಷ್ಟನೆ ನೀಡಿದ್ದು, ತಮ್ಮ ವಿರುದ್ಧ ಹರಿದಾಡುತ್ತಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದು ಆಕ್ರೋಶ ಹೊರಹಾಕಿದ್ದಾರೆ.

 

ನಾವು ಅಡ್ಡ ಮತದಾನ ಮಾಡಿದ್ದೇವೆ ಎಂದು ಮಾಧ್ಯಮಗಳಲ್ಲಿ ವಿನಾಕಾರಣ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಬಿಜೆಪಿಯಿಂದ ಒಬ್ಬ ಅಭ್ಯರ್ಥಿಗೆ 30 ಮತಗಳಂತೆ, ಇಬ್ಬರು ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಒಟ್ಟು 60 ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ನಮಗೂ ಸಹ ಪಕ್ಷದಿಂದ ಸ್ಪಷ್ಟವಾಗಿ ವಿಪ್ ಜಾರಿ ಮಾಡಲಾಗಿತ್ತು ಎಂದು ಸ್ಪಷ್ಟನೆ ನೀಡುದರು.

ನನಗೆ ಕೃಷ್ಣಾ ನಾಯಕ್ ಹಾಗೂ ದುರ್ಯೋಧನ ಐಹೊಳೆ ಅವರಿಗೆ ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಪಕ್ಷದಿಂದ ವಿಪ್ ನೀಡಲಾಗಿತ್ತು. ಅದರಂತೆ ನಾವೆಲ್ಲರೂ ಪಕ್ಷದ ಆದೇಶವನ್ನು ಅತ್ಯಂತ ಪ್ರಾಮಾಣಿಕವಾಗಿ ಪಾಲಿಸಿ, ಎನ್‌ಡಿಎ ಅಭ್ಯರ್ಥಿಗೇ ಮತ ಚಲಾಯಿಸಿದ್ದೇವೆ. ಆದರೆ, ಯಾರೋ ಮಾಡಿದ ಅಡ್ಡ ಮತದಾನಕ್ಕೆ ನಮ್ಮ ಹೆಸರುಗಳನ್ನು ತೇಲಿ ಬಿಟ್ಟಿರುವುದು ನಮಗೆ ತೀವ್ರ ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. 

ಯಾವುದೇ ಆಧಾರ ಅಥವಾ ದಾಖಲೆಗಳಿಲ್ಲದೆ ವಿನಾಕಾರಣ ನಮ್ಮ ಹೆಸರುಗಳನ್ನು ಬಳಸಿ ನಮಗೆ ಮುಜುಗರ ಉಂಟು ಮಾಡಬೇಡಿ ಮತ್ತು ನಮ್ಮ ಹೆಸರನ್ನು ಹಾಳು ಮಾಡಲು ಯತ್ನಿಸಬೇಡಿ ಎಂದು ಅವರು ಮಾಧ್ಯಮಗಳು ಹಾಗೂ ರಾಜಕೀಯ ವಲಯಕ್ಕೆ ಮನವಿ ಮಾಡಿದರು.

ಅಡ್ಡ ಮತದಾನದ ಕುರಿತು ತನಿಖೆ ನಡೆಸಲು ಬಿಜೆಪಿ ನಾಯಕ ಸಿ.ಟಿ. ರವಿ ಅವರ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿಯನ್ನು ರಚಿಸಲಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಿ.ಟಿ. ರವಿ ಅವರು ಇದುವರೆಗೆ ನಮ್ಮನ್ನು ನೇರವಾಗಿ ಸಂಪರ್ಕಿಸಿಲ್ಲ. ಪಕ್ಷವು ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಆ ಸಮಿತಿಯು ನಡೆಸುವ ತನಿಖೆ ಹಾಗೂ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಮುಕ್ತವಾಗಿ ಸಿದ್ಧನಿದ್ದೇನೆ. ಏಕೆಂದರೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಪ್ರಕಟಿಸಿದರು.

ತಾವು ಪಕ್ಷದ ನಿಷ್ಠಾವಂತ ಸಿಪಾಯಿಯಾಗಿದ್ದು, ಪಕ್ಷದ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸಿರುವುದಾಗಿ ಚಂದ್ರು ಲಮಾಣಿ ಮತ್ತೊಮ್ಮೆ ದೃಢಪಡಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಡಿ.ಕೆ.ಶಹಾ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ; ಗಣ್ಯರಿಂದ ಸತ್ಕಾರಗ್ಯಾರಂಟಿ ಪರಿಷ್ಕರಣೆ ಅನಿವಾರ್ಯ, ಆದರೆ ನಿಲ್ಲಿಸಲ್ಲ: ಸಚಿವ ಸತೀಶ್ ಜಾರಕಿಹೊಳಿಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ – ಕೃಷ್ಣ ಬೈರೇಗೌಡ ಕ್ಲಾಸ್‌ ಬೆನ್ನಲ್ಲೇ ಅಧಿಕಾರಿ ಅಮಾನತು, ಗುತ್ತಿಗೆದಾರನಿಗೆ ದಂಡ!ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ: ಯು.ಟಿ ಖಾದರ್ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು: ಕುಮಾರ್‌ ಬಂಗಾರಪ್ಪನಾನು ಅಡ್ಡ ಮತದಾನ ಮಾಡಿಲ್ಲ, ಮುಜುಗರ ಉಂಟು ಮಾಡಬೇಡಿ: ಚಂದ್ರು ಲಮಾಣಿ2 ಕೋಟಿ ವಿಮೆಗಾಗಿ ಗಂಡನನ್ನು ಕೊಂದ ಮಗಳು ಅರೆಸ್ಟ್ – ಊರಲ್ಲಿ ತಲೆ ಎತ್ತಲಾಗದೆ ತಾಯಿ ಆತ್ಮಹತ್ಯೆಸಂತೋಷದ ಬದುಕಿಗೆ ಯೋಗ ದಾರಿ : ವೀರಣ್ಣ ಚರಂತಿಮಠ