LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Advertisement
Advertisement
Advertisement

ಎಂ.ಕೆ.ಹುಬ್ಬಳ್ಳಿ: ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

 

ಕಾರ್ಖಾನೆಯ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು ಕಂಡಿದ್ದ ಸಮೃದ್ಧ, ಶಾಂತಿಯುತ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ಸೇರಿದಂತೆ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಖಾನೆಯ ಉಪಾಧ್ಯಕ್ಷರು, ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಕಾರ್ಮಿಕರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರಹರ್ ಘರ್ ತಿರಂಗಾ – ಹರ್ ಮನ್ ತಿರಂಗಾಕ್ಕೆ ಪ್ರೇರಣೆಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಧಾರವಾಡ | ಫಸಲ್ ಬಿಮಾ ಯೋಜನೆಯಲ್ಲಿ ಭಾರೀ ಗೋಲ್ಮಾಲ್‌ – 9 ಕೋಟಿಗೂ ಹೆಚ್ಚು ಹಣ ವಂಚನೆದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್