LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯಕ್ಕೆ ಮುಂದಾದ INDIA ಒಕ್ಕೂಟ

Advertisement

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹೊಸದಾಗಿ ಮಹಾಭಿಯೋಗ  ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.

ಕಾಂಗ್ರೆಸ್ಈ  ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದ್ದು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಡುವೆ ಈ ಕುರಿತು ಒಮ್ಮತ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ನಿರ್ಣಯಕ್ಕೆ ಸಂಬಂಧಿಸಿದ ನೋಟಿಸ್ ಅನ್ನು ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ವಾರವೇ ಸಂಸತ್ತಿನಲ್ಲಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗದ ಹಲವು ಆದೇಶ ಹಾಗೂ ನಿರ್ಧಾರಗಳಿಗೆ ಸಂಬಂಧಿಸಿದಂತೆ, ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಅಧಿಕೃತ ಆಕ್ಷೇಪಣೆಗಳನ್ನು ಎತ್ತಿದ್ದರು ಎಂದು ಮಾಧ್ಯಮ ವರದಿ ಪ್ರಕಟವಾದ ಬೆನ್ನಲ್ಲೇ ಪ್ರತಿಪಕ್ಷಗಳು ಈ ಕ್ರಮಕ್ಕೆ ಮುಂದಾಗಿವೆ.

ಆಯೋಗದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಕಳೆದ ಒಂದು ವರ್ಷದಲ್ಲಿ ಎಸ್‌ಐಆರ್  ಸೇರಿದಂತೆ ಕೈಗೊಂಡ ಎಲ್ಲಾ ನಿರ್ಧಾರಗಳನ್ನು ಒಮ್ಮತದಿಂದಲೇ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 

ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು ಮಹಾಭಿಯೋಗ ಪ್ರಕ್ರಿಯೆ ಆರಂಭಿಸಲು ಮುಂದಾಗಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಏಪ್ರಿಲ್ 24 ರಂದು ರಾಜ್ಯಸಭೆಯ 73 ಪ್ರತಿಪಕ್ಷ ಸಂಸದರು ದುರ್ನಡತೆಯ ಆಧಾರದ ಮೇಲೆ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ನೋಟಿಸ್ ನೀಡಿದ್ದರು. ಇದರಲ್ಲಿ ಒಂಬತ್ತು ನಿರ್ದಿಷ್ಟ ಆರೋಪಗಳನ್ನು ಉಲ್ಲೇಖಿಸಲಾಗಿತ್ತು. ಈ ನೋಟಿಸ್ ಇನ್ನೂ ಬಾಕಿ ಉಳಿದಿದೆ.

ಈ ಹಿಂದೆ ಸಹಿ ಮಾಡಿದ್ದ 73 ಸಂಸದರಲ್ಲಿ ಏಳು ಮಂದಿ ಈಗ ಬೇರೆ ಪಕ್ಷಗಳಿಗೆ ಪಕ್ಷಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸದನದ ಪ್ರಸ್ತುತ ಬಲಾಬಲ ಹಾಗೂ ಇತ್ತೀಚಿನ ಬೆಳವಣಿಗೆಗಳನ್ನು ಸೇರಿಸಿ ಹೊಸ ನೋಟಿಸ್ ಸಿದ್ಧಪಡಿಸಲಾಗುತ್ತಿದೆ. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ಎರಡೂ ಸದನಗಳಲ್ಲಿ ನೀಡಲಾಗಿದ್ದ ನೋಟಿಸ್‌ಗಳನ್ನು ಏಪ್ರಿಲ್ 6 ರಂದು ರಾಜ್ಯಸಭಾ ಸಭಾಪತಿ ಮತ್ತು ಲೋಕಸಭಾ ಸ್ಪೀಕರ್ ತಿರಸ್ಕರಿಸಿದ್ದರು.

ಪದಚ್ಯುತಿ ಪ್ರಕ್ರಿಯೆ ಹೇಗೆ?
ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ತೆಗೆದುಹಾಕುವ ಪ್ರಕ್ರಿಯೆಯು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ವಜಾಗೊಳಿಸುವ ನಿಯಮಗಳನ್ನೇ ಹೋಲುತ್ತದೆ. ಈ ಪ್ರಕ್ರಿಯೆಯನ್ನು ಆರಂಭಿಸಲು ಸಂಸತ್ತಿನಲ್ಲಿ ನಿಗದಿತ ಸಂಖ್ಯೆಯ ಸದಸ್ಯರ ಬೆಂಬಲ ಬೇಕಾಗುತ್ತದೆ. ನೋಟಿಸ್ ಅಂಗೀಕಾರವಾದರೆ ತನಿಖೆ ನಡೆಯಲಿದ್ದು, ಅಂತಿಮವಾಗಿ ಸಂಸತ್ತಿನಲ್ಲಿ ವಿಶೇಷ ಬಹುಮತದ ಮೂಲಕವಷ್ಟೇ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಸಾಧ್ಯ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಯಲ್ಲಿ ನಿಗೂಢ ಸ್ಫೋಟ – ಗೋಡೆ ಕುಸಿದು ಅಡುಗೆ ಸಿಬ್ಬಂದಿಗೆ ಗಾಯಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ1 ಲಕ್ಷ ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆಸಾವಿರಾರು ಮತದಾರರ ಹೆಸರು ತೆಗೆಯಲು ಅಭಯ್ ಪಾಟೀಲ್ ಪತ್ರ: ಬಂಧನಕ್ಕೆ ಹರಿಪ್ರಸಾದ್ ಆಗ್ರಹಲೋಕಾಯುಕ್ತರಿಂದ ಫೋನ್ ಪೇ ಪರಿಶೀಲನೆ, ಅಧಿಕಾರಿಗಳು ತಬ್ಬಿಬ್ಬುದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ – ವಿದ್ಯಾರ್ಥಿನಿ ದಾರುಣ ಸಾವುಪರಪ್ಪನ ಅಗ್ರಹಾರ ಜೈಲಿನ ವಾರ್ಡರ್‌ನಿಂದ ಹಲ್ಲೆ – ಡಾಬಾ ಮಾಲೀಕ ಸಾವುತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದಿಂದ ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿಕೆಶಿಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಮೂವರು ದುರ್ಮರಣ