LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ರಂಪಾಟ – ಲಗೇಜ್‌ ಬೆಲ್ಟ್‌ ಏರಿ ಕಿರುಚಾಡಿದ ಮಹಿಳೆ

Advertisement
Advertisement

ಭುವನೇಶ್ವರ: ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಸಿಟ್ಟಿಗೆದ್ದ ಮಹಿಳಾ ಪ್ರಯಾಣಿಕರೊಬ್ಬರು ವಿಮಾನ ಯಾನ ಸಂಸ್ಥೆಯ ಸಿಬ್ಬಂದಿ ಜೊತೆ ಜಗಳ ಮಾಡಿದ ಘಟನೆ ಭುವನೇಶ್ವರ ಏರ್‌ಪೋರ್ಟ್‌ನಲ್ಲಿ ನಡೆದಿದೆ. ಮಹಿಳೆ ಕಿರುಚಾಡಿ ಗಲಾಟೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಮಹಿಳೆ ಲಗೇಜ್ ಬೆಲ್ಟ್ ಮೇಲೇರಿ ಸಿಬ್ಬಂದಿಯ ಟೇಬಲ್‌ ಮೇಲಿದ್ದ ಕಾಗದಗಳು ಮತ್ತು ದಾಖಲೆಗಳನ್ನು ಎಸೆದು ಕೂಗಾಡಿರಿವುದು ಸೆರೆಯಾಗಿದೆ. ಸಿಬ್ಬಂದಿ ಹಾಗೂ ಕೆಲವು ಪ್ರಯಾಣಿಕರು ಅವಳನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಆದರೆ ಮಹಿಳೆ ತೀವ್ರ ಅಸಮಾಧಾನಗೊಂಡಿದ್ದು ವಾಗ್ವಾದ ಮುಂದುವರಿಸಿದ್ದರು.

ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಸಿಐಎಸ್‌ಎಫ್ ಸಿಬ್ಬಂದಿ ಮಧ್ಯಪ್ರವೇಶಿಸಿದರು. ಭದ್ರತಾ ಸಿಬ್ಬಂದಿ ಆಕೆಗೆ, ನೀವು ವಿಮಾನ ನಿಲ್ದಾಣದ ಆಸ್ತಿಗೆ ಹಾನಿ ಮಾಡುತ್ತಿದ್ದೀರಿ. ಮತ್ತೆ ಅಲ್ಲಿಗೆ ಹೋಗಬೇಡಿ ಎಂದು ಮನವರಿಕೆ ಮಾಡಿದರು. ಇದೇ ಮಹಿಳೆಗೆ ನೀರು ಕೊಟ್ಟು ಪ್ರಯಾಣಿಕರು ಸಮಾಧಾನ ಮಾಡಿದ್ದಾರೆ.

ಈ ಸಮಯದಲ್ಲಿ ಪ್ರಯಾಣಿಕರೊಬ್ಬರು ಅಲ್ಲಿನ ಪರಿಸ್ಥಿತಿಯನ್ನು ಭದ್ರತಾ ಸಿಬ್ಬಂದಿಗೆ ವಿವರಿಸುತ್ತಾ, “ಇಂಕಾ ಬಚ್ಚಾ ಬಿಮಾರ್ ಹೈ” (ಆಕೆಯ ಮಗು ಅಸ್ವಸ್ಥವಾಗಿದೆ) ಎಂದಿದ್ದಾರೆ.

ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ನಡೆದಿದ್ದೇನು?
ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ರದ್ದಾಗಿತ್ತು. ಹಲವಾರು ಗಂಟೆಗಳ ಕಾಲ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಕಾದಿದ್ದರು. ಕೆಲವರು ರದ್ದತಿಯ ಬಗ್ಗೆ ತಮಗೆ ಸರಿಯಾದ ಸಮಯದಲ್ಲಿ ತಿಳಿಸಿಲ್ಲ ಎಂದು ಆರೋಪಿಸಿದ್ದಾರೆ. ಇದರ ನಡುವೆ ಮಹಿಳೆ ಇಂಡಿಗೋ ವಿಮಾನದ ಸಿಬ್ಬಂದಿ ವಿರುದ್ಧ ಗಲಾಟೆ ಮಾಡಿದ್ದಾರೆ.

ಮಹಿಳೆ ವರ್ತನೆಗೆ ವಿರೋಧ
ಮಹಿಳೆಯ ನಡವಳಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ವಿಮಾನ ರದ್ದತಿ ಅಥವಾ ಕಾರ್ಯಾಚರಣೆಯ ಅಡಚಣೆಗಳಿಗೆ ವಿಮಾನ ನಿಲ್ದಾಣದ ಸಿಬ್ಬಂದಿ ಜವಾಬ್ದಾರರಲ್ಲ ಎಂದು ‌ಹಲವರು ಕಾಮೆಂಟ್‌ ಮಾಡಿದ್ದಾರೆ.

CISF ಕಠಿಣ ಕ್ರಮ ಕೈಗೊಳ್ಳಬೇಕು. ಅಂತಹ ನಡವಳಿಕೆ ತೋರುವ ಪ್ರಯಾಣಿಕರನ್ನು ವಿಮಾನ ಪ್ರಯಾಣದಿಂದ ನಿಷೇಧಿಸಬೇಕು ಎಂದು ಮತ್ತೊಬ್ಬರು ವಿಡಿಯೋಕ್ಕೆ ಕಾಮೆಂಟ್‌ ಮಾಡಿದ್ದಾರೆ. ಇಂಡಿಗೋ ಸಂಸ್ಥೆ ಈ ಘಟನೆ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ 18 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ224 ಶಾಸಕರೂ ನನಗೆ ಒಂದೇ, ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಡಿಕೆಶಿವರದಕ್ಷಿಣೆಗೆ ಬೆಳಗಾವಿ ಬಂಜಾರ ಸಮಾಜ ಬ್ರೇಕ್: ನಿಯಮ ಮೀರಿದರೆ 11 ಲಕ್ಷ ದಂಡವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನಲ್ಲಿ ಕರ್ಮಕಾಂಡ – ಡ್ರೆಸ್ಸಿಂಗ್‌ ರೂಂ, ಲೇಡಿಸ್ ಟಾಯ್ಲೆಟ್‌ನಲ್ಲಿ ಸಿಸಿಟಿವಿ ಪತ್ತೆಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ರಂಪಾಟ – ಲಗೇಜ್‌ ಬೆಲ್ಟ್‌ ಏರಿ ಕಿರುಚಾಡಿದ ಮಹಿಳೆಪುಣೆಯ 6,000 ಕೋಟಿ ಮೌಲ್ಯದ ಡ್ರಗ್ಸ್ ಮಾಫಿಯಾ ಕೇಸ್ – ಪ್ರಕರಣದ ಕಿಂಗ್‌ಪಿನ್ ವಿರೇಂದ್ರ ಬೈಸೋಯಾ ಅರೆಸ್ಟ್ಪುಣೆಯ 6,000 ಕೋಟಿ ಮೌಲ್ಯದ ಡ್ರಗ್ಸ್ ಮಾಫಿಯಾ ಕೇಸ್ – ಪ್ರಕರಣದ ಕಿಂಗ್‌ಪಿನ್ ವಿರೇಂದ್ರ ಬೈಸೋಯಾ ಅರೆಸ್ಟ್ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!