LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌, ಬರಪೀಡಿತ ಹಳ್ಳಿಗಳ ಪರಿಶೀಲನೆ

Advertisement

ಮಂಡ್ಯ: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ವಸ್ತುಸ್ಥಿತಿ ಅರಿಯಲು ಕೇಂದ್ರದ ಬರ ಅಧ್ಯಯನ ತಂಡ  ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯ ಡಾ.ನವೀನ್ ಕುಮಾರ್ ಜೈನ್ ನೇತೃತ್ವದ ಅಧಿಕಾರಿಗಳ ತಂಡ, ಪ್ರಮುಖ ಜಲಾಶಯವಾದ ಕೆಆರ್‌ಎಸ್ ಡ್ಯಾಂ  ಸೇರಿದಂತೆ ಜಿಲ್ಲೆಯ ಹಲವೆಡೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ನೈಜ ಸ್ಥಿತಿಯ ಮಾಹಿತಿ ಕಲೆಹಾಕಿತು. ಮೊದಲಿಗೆ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಭೇಟಿ ನೀಡಿದ ಕೇಂದ್ರ ತಂಡ, ಜಲಾಶಯದ ಪ್ರಸ್ತುತ ನೀರಿನ ಮಟ್ಟ, ಒಳಹರಿವು ಹಾಗೂ ಹೊರಹರಿವಿನ ಬಗ್ಗೆ ಪರಿಶೀಲನೆ ನಡೆಸಿತು. ಡ್ಯಾಂನಲ್ಲಿ ಸದ್ಯ ಲಭ್ಯವಿರುವ ನೀರೆಷ್ಟು? ಅದರಲ್ಲಿ ಕುಡಿಯುವ ನೀರಿಗೆ ಎಷ್ಟು ಮೀಸಲಿಡಲಾಗಿದೆ ಮತ್ತು ಕೃಷಿ ಚಟುವಟಿಕೆಗಳಿಗೆ ನೀರು ಹರಿಸಲು ಸಾಧ್ಯವಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಅವಲೋಕಿಸಿತು. 

ಕೆಆರ್‌ಎಸ್ ಪರಿಶೀಲನೆಯ ನಂತರ ಜಿಲ್ಲೆಯ ವಿವಿಧ ತಾಲೂಕುಗಳ ಬರಪೀಡಿತ ಹಳ್ಳಿಗಳಿಗೆ ತೆರಳಿದ ತಂಡ ಮಳೆಯ ಕೊರತೆಯಿಂದ ಕಂಗಾಲಾಗಿರುವ ರೈತರ ಸಮಸ್ಯೆಗಳನ್ನು ಆಲಿಸಿತು. ಒಣಗುತ್ತಿರುವ ಬೆಳೆಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆಯಿತು.

ಇದೇ ವೇಳೆ ಜಿಲ್ಲೆಯ ನೀರಾವರಿ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಕೇಂದ್ರ ತಂಡಕ್ಕೆ ಜಿಲ್ಲೆಯ ಒಟ್ಟಾರೆ ಬೆಳೆ ಹಾನಿ ನೀರಿನ ಕೊರತೆ ಮತ್ತು ರೈತರು ಎದುರಿಸುತ್ತಿರುವ ವಾಸ್ತವ ಸಂಕಷ್ಟಗಳ ಕುರಿತು ವಿಸ್ತೃತ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿದರು. ಪರಿಶೀಲನೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ತಂಡ ತಿಳಿಸಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಧಾರವಾಡ ಕೋರ್ಟ್‌ ಆವರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ರೌಡಿಶೀಟರ್‌ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನಾಪತ್ತೆರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳಿದ್ದರೆ ಸಮಗ್ರ ತನಿಖೆ ನಡೆಸಿ: ಸಿ.ಟಿ ರವಿಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ – ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈಅನ್ಯಾಯದ ವಿರುದ್ಧ ಧ್ವನಿ ಎತ್ತಲು `ಸತ್ಯಾಗ್ರಹ’ ಡಿಜಿಟಲ್ ವೇದಿಕೆ ಆರಂಭಿಸಿದ ರಾಹುಲ್ ಗಾಂಧಿಆರ್ಕೆಸ್ಟ್ರಾ ನೋಡ್ತಿದ್ದ ವೇಳೆ ದುರಂತ – ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ