LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ಯಾ? – ಜಸ್ಟ್‌ 10 ಸೆಕೆಂಡ್‌ನಲ್ಲಿ ಚೆಕ್‌ ಮಾಡಿ

Advertisement
Advertisement

ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ  ಪ್ರಕ್ರಿಯೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆ, ಆತಂಕ ನಿಮ್ಮನ್ನು ಕಾಡುತ್ತಿರಬಹುದು. ಆದರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ.

ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ವೆಬ್‌ಸೈಟ್‌ ರೂಪಿಸಿದೆ. ಈ ವೆಬ್‌ಸೈಟ್‌ನಲ್ಲಿ ನೀವು ನಿಮ್ಮ ಎಪಿಕ್‌ ನಂಬರ್‌ ನಮೂದಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ಒಂದು ವೇಳೆ ಈ ಸೈಟ್‌ನಲ್ಲಿ ಹೆಸರು ASDDO ಪಟ್ಟಿಗೆ ಸೇರ್ಪಡೆಯಾಗಿದ್ದರೆ ಮತದಾರರು ಫಾರ್ಮ್-6 ಸಲ್ಲಿಸಿ ಹೆಸರನ್ನು ಸೇರಿಸಬಹುದು. ನೀವು ಕರ್ನಾಟಕದ ಯಾವುದೇ ಭಾಗದಲ್ಲಿದ್ದರೂ ಫಾರ್ಮ್ – 6 (Form 6) ಭರ್ತಿ ಮಾಡುವ ಮೂಲಕ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು.

ಏನಿದು ASDDO ಪಟ್ಟಿ?
ರಾಜ್ಯದಲ್ಲಿ ಒಟ್ಟು 1.11 ಕೋಟಿ ಮತದಾರರು ASDDO ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ASDDO(ಗೈರು, ಸ್ಥಳಾಂತರಗೊಂಡವರು, ಮೃತರು, ನಕಲಿ ಮತ್ತು ಇತರರು – Absentee, Shifted, Dead, Duplicate, and Others) ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ಭಯ ಪಡುವ ಅಗತ್ಯವಿಲ್ಲ. 

ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ವಿವರಗಳನ್ನು ಸಲ್ಲಿಸಬಹುದು. ಒಂದು ವೇಳೆ ನಿಮಗೆ ಕಂಪ್ಯೂಟರ್‌ ಜ್ಞಾನವಿದ್ದರೆ ನೀವು ಆನ್‌ಲೈನ್‌ನಲ್ಲೇ https://voters.eci.gov.in/ ಈ ವೆಬ್‌ಸೈಟ್‌ಗೆ ಹೋಗಿ ಭರ್ತಿ ಮಾಡಬಹುದು.
asdo list222 sir

ASDDO ಪಟ್ಟಿಯಲ್ಲಿ ಹುಡುಕೋದು ಹೇಗೆ?
– ಮೊದಲು ನೀವು https://karnataka-asddo-lookup.vercel.app/ ವೆಬ್‌ಸೈಟಿಗೆ ಹೋಗಬೇಕು
– ಇಲ್ಲಿ ನಿಮ್ಮ ಎಪಿಕ್‌ ನಂಬರ್‌(ವೋಟರ್‌ ಐಡಿ) ನಂಬರ್‌ ಎಂಟ್ರಿ ಮಾಡಬೇಕು.
– ಎಂಟ್ರಿ ಮಾಡಿದಾಗ ಒಳ್ಳೆಯ ಸುದ್ದಿ – ಈ ಗುರುತಿನ ಚೀಟಿ ತೆಗೆದುಹಾಕಿದ ಪಟ್ಟಿಯಲ್ಲಿ ಇಲ್ಲ ಎಂಬ ಸಂದೇಶ ಬಂದರೆ ನಿಮ್ಮ ಹೆಸರು ಡಿಲೀಟ್‌ ಆಗಿಲ್ಲ ಎನ್ನುವುದು ದೃಢಪಡುತ್ತದೆ.
– ಈ ಪಟ್ಟಿ ತೆಗೆದುಹಾಕುವಿಕೆಗಳನ್ನು ಮಾತ್ರ ಒಳಗೊಂಡಿದೆ. ನಿಮ್ಮ ಹೆಸರು ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಳ್ಳಲು voters.eci.gov.in ನೋಡಿ ಅಥವಾ ನಿಮ್ಮ BLO ಅವರನ್ನು ವಿಚಾರಿಸಬಹುದು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಬರ ಜಿಲ್ಲೆಯೆಂದು ಘೋಷಿಸಲು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಆಗ್ರಹನೌಕರಿ ಹೆಸರಿನಲ್ಲಿ 6.17 ಲಕ್ಷ ರೂ. ವಂಚನೆಪ್ರಮಾಣಪತ್ರ ವಿತರಣೆ ಕಾರ್ಯದಿಂದ ಮುಕ್ತಗೊಳಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆರಾಜ್ಯದಲ್ಲಿ SIR ಅವಧಿ ವಿಸ್ತರಣೆ – ಆ.17 ರ ವರೆಗೆ ಬಿಎಲ್‌ಒ ಮನೆ ಮನೆ ಭೇಟಿಆಟವಾಡ್ತಿದ್ದ ವೇಳೆ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವುಗೂಂಡಾಗಿರಿ ಮಾಡಿ ಬಲವಂತವಾಗಿ ಹೊರಟ್ಟಿ ಬಳಿ ರಾಜೀನಾಮೆ ಕೊಡಿಸಿದ್ದಾರೆ: ಅಶೋಕ್‌ ಕಿಡಿಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಿ ಅಂತ ಹೈಕಮಾಂಡ್ ಹೇಳಿದ್ರೆ ಎಲ್ಲರೂ ಮಾಡಬೇಕು: ಪ್ರಿಯಾಂಕ್ ಖರ್ಗೆಶಿವಾನಂದ ನೀಲಣ್ಣವರ್‌ ಬಹುಕೋಟಿ ವಂಚನೆ ಕೇಸ್‌ಗೆ ಇಡಿ ಎಂಟ್ರಿ – ಮೂರು ಕಡೆ ದಾಳಿ ʻಲೋಕಾʼ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು – 1.50 ಲಕ್ಷ ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ಲಾಕ್ರೈತರು ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ಸಚಿವ ಕೆ.ಹೆಚ್ ಮುನಿಯಪ್ಪ