LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ; 20 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
Advertisement
Advertisement

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ  ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ ಇಲ್ಲಿದೆ. ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ನ್ಯಾಯಾಂಗ ಕ್ಷೇತ್ರದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಹುದ್ದೆಯ ವಿವರಗಳು ಮತ್ತು ಶೈಕ್ಷಣಿಕ ಅರ್ಹತೆ:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 20 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 81,100 ರೂ. ವರೆಗೆ ವೇತನ ಸಿಗಲಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸೈನ್ಸ್, ಆರ್ಟ್ಸ್, ಕಾಮರ್ಸ್, ಬಿಸಿನೆಸ್ ಮ್ಯಾನೇಜ್‌ಮೆಂಟ್, ಕಂಪ್ಯೂಟರ್ ಅಪ್ಲಿಕೇಶನ್ಸ್ ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯಗಳಲ್ಲಿ ಕನಿಷ್ಠ ಶೇ. 55 ಅಂಕಗಳೊಂದಿಗೆ ಪದವಿ (Degree) ಪೂರ್ಣಗೊಳಿಸಿರಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 50 ಅಂಕಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರಗಳು:

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 40 ವರ್ಷಗಳಾಗಿದೆ. ಸರ್ಕಾರದ ನಿಯಮಾವಳಿಗಳ ಪ್ರಕಾರ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC, ST, Cat-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹350 ಹಾಗೂ SC, ST, Cat-I ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 200ರೂ. ನಿಗದಿಪಡಿಸಲಾಗಿದ್ದು, ಇದನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ.

 

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ಒಟ್ಟು 100 ಅಂಕಗಳ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನಡೆಸಲಾಗುತ್ತದೆ. ಇದರಲ್ಲಿ ಇಂಗ್ಲಿಷ್ ಪ್ರಬಂಧಕ್ಕೆ 30 ಅಂಕಗಳು (ಕನಿಷ್ಠ 20 ಅಂಕಗಳು ಪಡೆಯಬೇಕು), ಕನ್ನಡದಿಂದ ಇಂಗ್ಲಿಷ್ ಭಾಷಾಂತರಕ್ಕೆ 30 ಅಂಕಗಳು (ಕನಿಷ್ಠ 20 ಅಂಕಗಳು ಪಡೆಯಬೇಕು), ಸಾಮಾನ್ಯ ಜ್ಞಾನ ಪರೀಕ್ಷೆಗೆ 20 ಅಂಕಗಳು (ಕನಿಷ್ಠ 10 ಅಂಕಗಳು ಪಡೆಯಬೇಕು) ಮತ್ತು ನೇರ ಸಂದರ್ಶನಕ್ಕೆ 20 ಅಂಕಗಳನ್ನು (ಕನಿಷ್ಠ 10 ಅಂಕಗಳು ಪಡೆಯಬೇಕು) ಕಾಯ್ದಿರಿಸಲಾಗಿದೆ. ಉತ್ತೀರ್ಣರಾಗಲು ಒಟ್ಟಾರೆಯಾಗಿ ಕನಿಷ್ಠ 60 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ:

ಅರ್ಹ ಅಭ್ಯರ್ಥಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನಾಂಕವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ ಕೇಸ್‌ – 6 ಮಂದಿ ಅರೆಸ್ಟ್‌ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ – ಎಫ್‌ಐಆರ್‌ ದಾಖಲುತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ“ದಲಿತರ 187 ಕೋಟಿ ಹಣವನ್ನು ನುಂಗಿದ ನಾಗೇಂದ್ರ ರಾಜೀನಾಮೆ ನೀಡಲೇಬೇಕು” – ವಿಧಾನಸೌಧ ಮುತ್ತಿಗೆ, ಬಿಜೆಪಿ ನಾಯಕರು ವಶH1N1 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಇಲಾಖೆ ಹೈ ಅಲರ್ಟ್, ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧSIR ಮೊದಲ ಮತದಾರರ ಕರಡು ಪಟ್ಟಿ ರಿಲೀಸ್‌; 1,07,96,339 ಮತದಾರರ ಹೆಸರು ಡಿಲೀಟ್‌ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆಸಮುದ್ರಕ್ಕೆ ಉರುಳಿದ ಕಾರು – ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಸಾವುಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವಆತಂಕರಿ ಗಿಡ ಮರಗಳು ಹಾಗೂ ರಂಬೆ ಕಾಂಬೆ ಕತ್ತರಿಸಲು ಯಂತ್ರ ಖರೀದಿ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ