LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Advertisement
Advertisement
Advertisement

ಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೆಂಗಳೂರಿನ ಆರ್.ಆರ್. ನಗರದಲ್ಲಿ ಕೆ.ಡಿ.ಸಿ. ಡೆಂಟಲ್ ಕೇರ್ ಹಾಗೂ ಪಿ-ಕ್ಯಾನ್ಸರ್ ಸೆಂಟರ್ ವತಿಯಿಂದ ಆಯೋಜಿಸಲಾಗಿರುವ ‘ಉಚಿತ ಬಾಯಿ ಆರೋಗ್ಯ ತಪಾಸಣಾ ಶಿಬಿರ’ಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

 ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯಲಿರುವ ಈ ಅಭಿಯಾನವು ಸಾರ್ವಜನಿಕರಲ್ಲಿ ಬಾಯಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಜೊತೆಗೆ, ಅಗತ್ಯವಿರುವವರಿಗೆ ಸೂಕ್ತ ತಪಾಸಣೆ ಹಾಗೂ ಚಿಕಿತ್ಸೆಯ ಕುರಿತು ಮಾರ್ಗದರ್ಶನ ನೀಡುವ ಮಹತ್ವದ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.
ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ವಹಿಸಿ, ಆರಂಭಿಕ ಹಂತದಲ್ಲೇ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ. ಬಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಇಂತಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಜನರನ್ನು ತಲುಪುವಂತಾಗಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಸಾರ್ವಜನಿಕ ಆರೋಗ್ಯದ ವಿಚಾರದಲ್ಲಿ ಸರ್ಕಾರದ ಪ್ರಯತ್ನಗಳಿಗೆ ಖಾಸಗಿ ಸಂಸ್ಥೆಗಳು, ವೈದ್ಯಕೀಯ ಕ್ಷೇತ್ರದವರು ಹಾಗೂ ಸಂಘ-ಸಂಸ್ಥೆಗಳು ಸಹಕಾರ ನೀಡಿದಾಗ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಇದೇ ವೇಳೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಡಾ. ನಿರಂಜನ ಪರಮಶೆಟ್ಟಿ, ಡಾ. ಭಾಗ್ಯಲಕ್ಷ್ಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರಹರ್ ಘರ್ ತಿರಂಗಾ – ಹರ್ ಮನ್ ತಿರಂಗಾಕ್ಕೆ ಪ್ರೇರಣೆಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಧಾರವಾಡ | ಫಸಲ್ ಬಿಮಾ ಯೋಜನೆಯಲ್ಲಿ ಭಾರೀ ಗೋಲ್ಮಾಲ್‌ – 9 ಕೋಟಿಗೂ ಹೆಚ್ಚು ಹಣ ವಂಚನೆದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್