LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮೂಹಿಕ ಮದುವೆಯಲ್ಲಿ 106 ಜೋಡಿಗೆ ಸೀಮೆ ಹಸು ಗಿಫ್ಟ್ ಕೊಟ್ಟ `ಕೈ’ ಶಾಸಕ

Advertisement
Advertisement
Advertisement

ಚಿಕ್ಕಬಳ್ಳಾಪುರ: ಸಾಮೂಹಿಕ ವಿವಾಹ  ಅಂದ್ರೆ ಸಾಮಾನ್ಯವಾಗಿ ನವಜೋಡಿಗಳಿಗೆ ಬಟ್ಟೆ, ಆಭರಣ ಸೇರಿದಂತೆ ವಿವಿಧ ಉಡುಗೊರೆಗಳನ್ನು ನೀಡಲಾಗುತ್ತದೆ. ಆದರೆ ಚಿಕ್ಕಬಳ್ಳಾಪುರ  ಜಿಲ್ಲೆಯ ಬಾಗೇಪಲ್ಲಿಯಲ್ಲಿ  ನಡೆದ ಸಾಮೂಹಿಕ ವಿವಾಹದಲ್ಲಿ ನೂತನ ದಂಪತಿಗಳಿಗೆ ನೀಡಿದ ಉಡುಗೊರೆ ಮಾತ್ರ ವಿಭಿನ್ನವಾಗಿತ್ತು. ಮದುವೆಯಾದ ಜೋಡಿಗಳಿಗೆ ಸೀಮೆ ಹಸುವನ್ನೇ ಉಡುಗೊರೆಯಾಗಿ ನೀಡಲಾಗಿದೆ.

ಬಾಗೇಪಲ್ಲಿ ತಾಲೂಕಿನ ಗಡಿದಂ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಎಸ್.ಎನ್. ಚಾರಿಟೇಬಲ್ ಟ್ರಸ್ಟ್ ವತಿಯಿಂದ 23ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬರೋಬ್ಬರಿ 106 ಜೋಡಿಗಳು ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನೂತನ ದಂಪತಿಗಳಿಗೆ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಸೀಮೆ ಹಸುವನ್ನು ಉಡುಗೊರೆಯಾಗಿ ನೀಡಿದ್ದಾರೆ. 

ಸೀಮೆ ಹಸುವಿನ ಜೊತೆಗೆ 50 ಸಾವಿರ ರೂ. ನಗದು ಸಹಾಯ ನೀಡಲು ಮುಂದಾಗಿದ್ದಾರೆ. ಇನ್ನು ಸಾಮೂಹಿಕ ವಿವಾಹದ ಜೊತೆಗೆ ಶ್ರೀ ತಿರುಮಲ ತಿರುಪತಿ ದೇವಸ್ಥಾನದ ವತಿಯಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವವನ್ನೂ ಆಯೋಜಿಸಲಾಗಿತ್ತು. 

ಕಾರ್ಯಕ್ರಮಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ, ಮಾಜಿ ಸಂಸದ ಡಿ.ಕೆ. ಸುರೇಶ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಮಾಜಿ ಸಚಿವ ಶಿವಶಂಕರ ರೆಡ್ಡಿ, ಮಾಜಿ ಶಾಸಕ ಎನ್. ಸಂಪಂಗಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ನೂರಾರು ಜೋಡಿಗಳ ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಬಾಗೇಪಲ್ಲಿಯಲ್ಲಿ, ನವ ದಂಪತಿಗಳ ಬದುಕಿಗೆ ಆರ್ಥಿಕ ನೆರವಾಗಲಿ ಎಂಬ ಉದ್ದೇಶದಿಂದ ಸೀಮೆ ಹಸು ಹಾಗೂ ನಗದು ಉಡುಗೊರೆ ನೀಡಿರುವುದು ವಿಶೇಷವಾಗಿತ್ತು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲುರಾಕಿಂಗ್ ಸ್ಟಾರ್ ಅಬ್ಬರ – ಮೊದಲ ದಿನವೇ 140 ಕೋಟಿ ಬಾಚಿದ ಟಾಕ್ಸಿಕ್ಮನೆಯಲ್ಲೇ 50 ಲಕ್ಷ ಕದ್ದ ಮಗ – ಗರ್ಲ್‌ಫ್ರೆಂಡ್‌ಗೆ 5 ಲಕ್ಷ ಖರ್ಚು, 1.5 ಲಕ್ಷದ iPhone ಗಿಫ್ಟ್!Bro Wait, ಭಾರತ್ ಮಾತಾ ಕಿ ಜೈ ಶುರು ಮಾಡೋಣ – ರಾಗಾ ಪಿತೃಪ್ರಧಾನ ವ್ಯವಸ್ಥೆ ಹೇಳಿಕೆಗೆ ಕಂಗನಾ ತಿರುಗೇಟುನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ, ಹಿಜಾಬ್‌ ಆದೇಶ ಇಸ್ಲಾಂ ಮೇಲಿನ ನೇರ ದಾಳಿ – ಹೈಕೋರ್ಟ್ ತೀರ್ಪಿಗೆ ಓವೈಸಿ ಕಿಡಿಟ್ರಕ್‌ಗೆ ಕಾರು ಡಿಕ್ಕಿ – 23 ವರ್ಷದ ಯೂಟ್ಯೂಬರ್, ತಾಯಿ ಸಾವುನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ ಸದ್ಯಕ್ಕೆ ರಾಜೀನಾಮೆ ವಿಚಾರ ಇಲ್ಲ: ಸಿಎಂತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲುಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು: ನಿಖಿಲ್ ಕುಮಾರಸ್ವಾಮಿನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು