LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರು

ಮಂಡ್ಯ: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು  ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರಿನ  ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ – ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಗೋವಿಂದರಾಜು ಅವರ ಕಾರನ್ನು ಅಡ್ಡಗಟ್ಟಿ ಕಾರಿನ ಗಾಜು ಒಡೆದು, ಮಾರಕಾಸ್ತ್ರಗಳನ್ನು ತೋರಿಸಿ, ಬೆದರಿಕೆ ಹಾಕಿ 26 ಲಕ್ಷ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಗೋವಿಂದರಾಜು ತಕ್ಷಣ ಮದ್ದೂರು ಪೊಲೀಸರಿಗೆ ಘಟನೆ ಕುರಿತು ಮಾಹಿತಿ ನೀಡಿದರು. ತಕ್ಷಣ ವೃತ್ತ ನಿರೀಕ್ಷಕ ನವೀನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ, ಎಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಯಶ್ವಂತ್‌ಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್