LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್‌ಸಿ ಅಕ್ರಮ: ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ

Advertisement
Advertisement

ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಶಿವಮೊಗ್ಗದ  ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಟ್ರಸ್ಟ್ ಪದಾಧಿಕಾರಿಗಳು, 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 40 ಲಕ್ಷದಿಂದ 80 ಲಕ್ಷ ರೂ.ವರೆಗೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿಯ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ವಿಚಾರಣಾ ಸಮಿತಿ ರಚನೆ ಮಾಡಲಾಗಿದೆ. ಆದರೆ ಇದು ಕೇವಲ ಆರೋಪಗಳಿಂದ ಮುಕ್ತರಾಗುವ ಒಳಸಂಚು ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಯಾವುದೇ ಕಾರಣಕ್ಕೂ ಆಂತರಿಕ ವಿಚಾರಣಾ ಸಮಿತಿಯನ್ನು ಮುಂದುವರಿಸದೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತುರ್ತು ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಉಪಸಮಿತಿ ತನಿಖಾ ವರದಿ ಬರುವವರೆಗೆ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಡೆ ನೀಡಿರುವುದು ಸ್ವಾಗತಾರ್ಹ ಎಂದು ಟ್ರಸ್ಟ್ ಹೇಳಿದೆ. ಜೊತೆಗೆ, ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷ ಶಿವಶಂಕರ್ ಎಸ್. ಸಾಹುಕಾರ್ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ ದಾಖಲಾಗಿದ್ದು, ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಮನವಿಯಲ್ಲಿ, NEET ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿ, ಕೆಪಿಎಸ್‌ಸಿಯಲ್ಲೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬರುತ್ತಿವೆ ಎಂದು ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೊ ಸಂಭಾಷಣೆಗಳು ಕೂಡ ಸೋರಿಕೆಯಾಗಿದ್ದು, ಇದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿ ಕೈಮೀರುವ ಮುನ್ನವೇ ಸರ್ಕಾರ ಕೆಪಿಎಸ್‌ಸಿ ಅಕ್ರಮದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕು ಎಂದು ಟ್ರಸ್ಟ್ ಮನವಿಯಲ್ಲಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಹೆಚ್.ಎಂ. ಸಂಗಯ್ಯ, ಆಲಿಂಖಾನ್, ಕೋಡ್ಲು ಶ್ರೀಧರ್, ಬಸವರಾಜ್ ಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತಪ್ರೀತಿಯ ಬಲೆಗೆ ಬಿದ್ದು ಗರ್ಭಿಣಿಯಾದ ಅಪ್ರಾಪ್ತೆ – ಗಂಡು ಮಗುವಿಗೆ ಜನ್ಮ, ಪ್ರಿಯಕರನ ವಿರುದ್ಧ ಪೋಕ್ಸೋ ಕೇಸ್‌ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರಕಾವೇರಿ ಜಲ ವಿವಾದ ಚರ್ಚೆಗೆ ತಮಿಳುನಾಡು ಪಟ್ಟು – ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದರಾಹುಲ್ ಗಾಂಧಿ ʻಮೂರ್ಖʼ ಹೇಳಿಕೆಗೆ ರಿಜಿಜು ತೀವ್ರ ಆಕ್ಷೇಪ – ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು – ಜೆಡಿಎಸ್ ಆಗ್ರಹ