LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Advertisement

ನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ಆದೇಶಕ್ಕೆ ಸುಪ್ರೀಂ ಕೋರ್ಟ್  ಮಧ್ಯಂತರ ತಡೆ ನೀಡಿದೆ.

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾದ ದಿನದಿಂದಲೂ ಸಿಐಡಿ  ಅಧಿಕಾರಿಗಳು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಕೆಲವು ಅಭ್ಯರ್ಥಿಗಳು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅನಿರೀಕ್ಷಿತವಾಗಿ ಎಸ್‌ಐಟಿ ರಚನೆಗೆ ಆದೇಶಿಸಿದೆ. ಹೈಕೋರ್ಟ್ ಸೂಚಿಸಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಈ ಹಿಂದೆ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಯ ಮೇಲಿರುವ ಆರೋಪಗಳ ಕುರಿತ ದಾಖಲೆಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. 

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅಭ್ಯರ್ಥಿಗಳ ಪರ ವಕೀಲರು, “ಹೈಕೋರ್ಟ್ ಇಡೀ ರಾಜ್ಯದ ಅರ್ಹ ಅಧಿಕಾರಿಗಳನ್ನು ಪರಿಶೀಲಿಸಿ ಸಮರ್ಥ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಿದೆ. ಹೀಗಿರುವಾಗ ಸರ್ಕಾರಕ್ಕೆ ಈ ತನಿಖೆಗೆ ಹಿಂಜರಿಕೆ ಏಕೆ? ಸರ್ಕಾರಕ್ಕೆ ತಮಗೆ ಬೇಕಾದ ಅಧಿಕಾರಿಗಳನ್ನೇ ನೇಮಿಸಬೇಕೆಂಬ ಉದ್ದೇಶವಿದೆಯೇ? ಅಧಿಕಾರಿಗಳ ಮೇಲೆ ಆಕ್ಷೇಪವಿದ್ದರೆ ಹೈಕೋರ್ಟ್‌ಗೆ ಹೋಗಬೇಕಿತ್ತು” ಎಂದು ಬಲವಾಗಿ ವಾದಿಸಿದರು.

ಉಭಯ ಕಡೆಯ ವಾದ ಆಲಿಸಿದ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ, “ನಿರ್ದಿಷ್ಟ ಅಧಿಕಾರಿಯ ನೇಮಕದ ಬಗ್ಗೆ ಆಕ್ಷೇಪಗಳಿದ್ದರೆ ಹೈಕೋರ್ಟ್ ಮೊರೆ ಹೋಗಬಹುದಿತ್ತು, ನಾವು ಇಂತಹ ಆಡಳಿತಾತ್ಮಕ ಆಯ್ಕೆಗಳಲ್ಲಿ ಸುಲಭವಾಗಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಅಭಿಪ್ರಾಯಪಟ್ಟಿತು.

ಕೊನೆಗೆ ಸರ್ಕಾರದ ಆಕ್ಷೇಪವನ್ನು ಪರಿಗಣಿಸಿದ ನ್ಯಾಯಪೀಠ, ಅಧಿಕಾರಿಯ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ  ಸಲ್ಲಿಸುವಂತೆ ಸೂಚಿಸಿತು.ಎಸ್‌ಐಟಿ ರಚನೆಗೆ ಸರ್ಕಾರಕ್ಕೆ ಸಮ್ಮತವಿರುವ ಇತರ ಸಮರ್ಥ ಅಧಿಕಾರಿಗಳ ಪಟ್ಟಿಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿತು.ಅಂತಿಮವಾಗಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿತು.

ಕಳೆದ ಹತ್ತು ದಿನಗಳಿಂದಲೂ ಸಿಐಡಿ ಪೊಲೀಸರು ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಎಸ್‌ಐಟಿ ರಚನೆಗೆ ತಡೆ ನೀಡಿರುವುದರಿಂದ, ಅಂತಿಮವಾಗಿ ಪ್ರಕರಣದ ತನಿಖೆಯನ್ನು ಸಿಐಡಿಯೇ ಮುಂದುವರಿಸಲಿದೆಯೇ ಅಥವಾ ಹೊಸ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚನೆಯಾಗಲಿದೆಯೇ ಎಂಬ ಕುತೂಹಲ ಮುಂದುವರಿದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾ ಆಯೋಗದ ಕಚೇರಿ ಮೆಟ್ಟಿಲಲ್ಲೇ ಸಿಎಂ, ಸಚಿವರ ಧರಣಿ; ಎಫ್‌ಐಆರ್‌ಗೆ ಪಟ್ಟುಬಾಲಕೃಷ್ಣನ ಜೊತೆ ಸೈಕಲ್ ತಳ್ಳಿಕೊಂಡೇ 40 ಸಾವಿರ ಕಿಮೀ ಪಾದಯಾತ್ರೆ ಮಾಡಿದ ಗೀತಾ ಮಾತಾಜಿ!ನೈಸ್‌ ವಿಚಾರವಾಗಿ ಡಿಕೆಶಿ ಭೇಟಿಯಾಗಿದ್ದು ಸತ್ಯ – ಸಿದ್ದಲಿಂಗ ಮಹಾಸ್ವಾಮಿಗಳಿಂದ ಸ್ಪಷ್ಟನೆಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆಶಾಲೆಗಳಲ್ಲಿದ್ದ ಉರ್ದು ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಂದು ಬಿಟ್ಟಿದೆ: ಛಲವಾದಿಸಚಿವ ಬಾಲಕೃಷ್ಣ ನಕಲಿ ದಾಖಲೆ ಸೃಷ್ಟಿಸಿ 36 ಎಕರೆ ಜಾಗ ಕಬಳಿಸಿದ್ದಾರೆ: ಮಂಜುನಾಥ್ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ; ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆ, ಹಲವೆಡೆ ಹಾನಿರೈತರಿಗೆ 25 ಸಾವಿರ ಪರಿಹಾರ ಕೊಟ್ಟರೆ ಮಾತ್ರ ಸರ್ವಪಕ್ಷ ನಿಯೋಗದಲ್ಲಿ ಭಾಗಿ- ಛಲವಾದಿವಿಧಾನಸೌಧದ ಮೆಟ್ಟಿಲ ಮೇಲೆ ಉರ್ದು ಭಾಷಾ ಹಬ್ಬ ಇಲ್ಲ: ಸಿಎಂ ಕಚೇರಿಲಾರಿ, KSRTC ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಮಗು ಸಾವು, 10 ಮಂದಿಗೆ ಗಾಯ