LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

100 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Advertisement

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದ  ನೀರಿನ ಮಟ್ಟ ದಿನದಿಂದ ದಿನಕ್ಕೆ ಗಣನೀಯವಾಗಿ ಕುಸಿಯುತ್ತಿದ್ದು, ಸದ್ಯ ನೀರಿನ ಮಟ್ಟ 100 ಅಡಿಗೆ ತಲುಪಿದೆ. ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವುದು ಮತ್ತು ಮಳೆಯ ಕೊರತೆಯೇ ಈ ಇಳಿಕೆಗೆ ಪ್ರಮುಖ ಕಾರಣವಾಗಿದ್ದು, ಸಾರ್ವಜನಿಕರಲ್ಲಿ ಹಾಗೂ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ.

ಜಲಾಶಯದ ಒಟ್ಟು ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ 100.88 ಅಡಿ ನೀರು ಮಾತ್ರ ಉಳಿದಿದ್ದು, ಒಟ್ಟು 23.507 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಈ ಮಳೆಗಾಲದಲ್ಲಿ ಜಲಾಶಯವು ಗರಿಷ್ಠ 110 ಅಡಿಗಳವರೆಗೆ ಮಾತ್ರ ಭರ್ತಿಯಾಗಿತ್ತು. 

ಜಲಾಶಯಕ್ಕೆ ಒಳಹರಿವು ಅತ್ಯಂತ ಕನಿಷ್ಠ ಮಟ್ಟದಲ್ಲಿದ್ದು, ಹೊರಹರಿವು ಮಾತ್ರ ಮುಂದುವರಿದಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ಹಾಗೂ ಬೆಳೆಗಳಿಗೆ ತೀವ್ರ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. 

ಪ್ರಸ್ತುತ ಜಲಾಶಯದ ನೀರಿನ ವಿವರ:
ಗರಿಷ್ಠ ಮಟ್ಟ: 124.80 ಅಡಿ
ಪ್ರಸ್ತುತ ನೀರಿನ ಮಟ್ಟ: 100.88 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
ಲಭ್ಯವಿರುವ ನೀರು: 23.507 ಟಿಎಂಸಿ
ಒಳಹರಿವು: 574 ಕ್ಯೂಸೆಕ್
ಹೊರಹರಿವು: 2658 ಕ್ಯೂಸೆಕ್

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
100 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟಬಡ ರೋಗಿಗಳಿಗೆ ಸೇರಬೇಕಿದ್ದ ಔಷಧಿಗಳು ತಿಪ್ಪೆ ಪಾಲುಇಂದಿನಿಂದ 108 ಅಂಬುಲೆನ್ಸ್ ನೌಕರರ ಮುಷ್ಕರ – ಸಾರ್ವಜನಿಕರಿಗೆ ಸಮಸ್ಯೆಯಾದ್ರೆ ಹುಷಾರ್ ಎಂದ ಖಾದರ್ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆನಮ್ಮದು ಸೌಜನ್ಯದ ಭೇಟಿಯಷ್ಟೇ – ಸಿದ್ದರಾಮಯ್ಯವರದಕ್ಷಿಣೆ ಕಿರುಕುಳ ಆರೋಪ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆನವರಾತ್ರಿ ಸಂಭ್ರಮದ ನಡುವೆ ಅವಘಡ – ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿಅಂಜನಾದ್ರಿ ಬೆಟ್ಟದಿಂದ ಮುಜರಾಯಿ ಇಲಾಖೆಯ ಸಿಬ್ಬಂದಿ ಹೊರಕ್ಕೆ – ಎಲ್ಲ ಕಚೇರಿಗಳಿಗೆ ಬೀಗ ಜಡಿದ ವಿದ್ಯಾದಾಸ್ ಬಾಬಾಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನ ಹತ್ಯೆ; ಆರೋಪಿ ಅರೆಸ್ಟ್, ಅಂಗಡಿ ನೆಲಸಮ