ರಾಯಚೂರು: ಮಾಜಿ ಸಚಿವ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಂದು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಸಲ್ಲಿಸಿದ್ದಾರೆ.
ಪತ್ನಿ, ಪುತ್ರ, ಸೊಸೆ, ಮೊಮ್ಮಕ್ಕಳ ಜೊತೆ ಮಠಕ್ಕೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ಮಂತ್ರಾಲಯ ರಾಯರ ಮಠದಲ್ಲಿ ಗುರುರಾಯರ ವೃಂದಾವನ ದರ್ಶನ ಪಡೆದು ಪುನೀತರಾಗಿದ್ದಾರೆ.
ಮಂಚಾಲಮ್ಮ ದೇವಿ ದರ್ಶನ ಪಡೆದು ಬಳಿಕ ರಾಯರ ವೃಂದಾವನಕ್ಕೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಯರ ಭಕ್ತರಾಗಿರುವ ಈಶ್ವರಪ್ಪ ಆಗಾಗ ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ ಕುಟುಂಬ ಸಮೇತ ಆಗಮಿಸಿ ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.



