LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಚಾಲಕ ಸ್ಥಳದಲ್ಲೇ ಸಾವು, 12 ಪ್ರಯಾಣಿಕರಿಗೆ ಗಾಯ

Advertisement

ಚಿಕ್ಕೋಡಿ: ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್  ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಗಂಗಾವತಿಯಿಂದ ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುತ್ತಿದ್ದ ಬಸ್ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾಗುತ್ತಿದ್ದ ವೇಳೆ ಟಿಪ್ಪರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ತಕ್ಷಣವೇ ಸಂಕೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಬಸ್ ಗಂಗಾವತಿ–ಕೊಲ್ಲಾಪುರ ಮಾರ್ಗದಲ್ಲಿ ಸಂಚರಿಸುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್. ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಪ್ರಗತಿಯಲ್ಲಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ವೀಕ್ಷಣೆಗೆ KSTDC ವಿಶೇಷ ವ್ಯವಸ್ಥೆ – ಅಂಬಾರಿ ಡಬಲ್ ಡೆಕ್ಕರ್ ಬಸ್, 7 ವಿಶೇಷ ಪ್ಯಾಕೇಜ್‌ಗಳುಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು ಶಿಕ್ಷೆಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲು ಧನಂಜಯನ ಆಯ್ಕೆ ಬಹುತೇಕ ಖಚಿತವಿರಾಜಪೇಟೆ | ಹೇರೂರು ಎಸ್ಟೇಟ್ ಬಳಿ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆನಾಳೆಯ ಸಿಜೆಪಿ ಪ್ರತಿಭಟನೆಗೆ ಅನುಮತಿ ಇಲ್ಲ: ದೆಹಲಿ ಪೊಲೀಸರ ಸ್ಪಷ್ಟನೆಸ್ಟಿಂಗ್‌ ಆಪರೇಷನ್‌ಗಾಗಿ ದೆಹಲಿ ಏಜೆನ್ಸಿಗೆ ಸುಪಾರಿ – ಪೆನ್‌ಡ್ರೈವ್ ಪ್ರದರ್ಶಿಸಿ ಹೊಸ ಬಾಂಬ್‌ ಸಿಡಿಸಿದ ಗಣಿಗ ರವಿCJP ಪ್ರತಿಭಟನೆಗೆ ಸಜ್ಜು; ಮೆಟ್ರೋ ನಿರ್ಬಂಧ, ರೈಲುಗಳ ರದ್ದು, 23,000 ಪೊಲೀಸರ ನಿಯೋಜನೆಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್ಬಾಯ್‌ಫ್ರೆಂಡ್‌ ಜೊತೆ ಸೇರಿ ಮಗಳಿಂದಲೇ ತಂದೆಯ ಹತ್ಯೆ ಆರೋಪ – 2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ