LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Advertisement
Advertisement
Advertisement


ಬೆಳಗಾವಿ: ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲಿಸಿದರು.
ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂ. ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದರ ಜೊತೆಗೆ ಕ್ರೀಡೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ.
ಸಭೆಯಲ್ಲಿ ಹಿಂಡಲಗಾ, ಬೆನಕನಹಳ್ಳಿ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ, ಯೋಜನೆಯ ಅನುಷ್ಠಾನ ಹಾಗೂ ಇದುವರೆಗೆ ಆಗಿರುವ ಪ್ರಗತಿ ಕುರಿತು ವಿವರವಾಗಿ ಚರ್ಚಿಸಲಾಯಿತು. ಯೋಜನೆಯ ಪ್ರಯೋಜನ ಅರ್ಹ ಯುವಜನರಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಹಿಂಡಲಗಾ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಬೆನಕನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಲಸಿದ್ದಪ್ಪ ಸುಳನ್ನವರ್ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಭಿಷೇಕ್ ಪಾಂಡೆ ಉಪಸ್ಥಿತರಿದ್ದರು.

ಸಾರ್ವಜನಿಕರ ಅಹವಾಲು ಆಲಿಕೆ

ಇದಕ್ಕೂ ಮೊದಲು ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೆಬ್ಬಾಳಕರ್ ಅವರ ಗಮನಕ್ಕೆ ತಂದರು.
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಹಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಕ್ರಮ ಕೈಗೊಂಡರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರುಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರುಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನವಂದೇ ಮಾತರಂನ ಎರಡು ಚರಣ ಹಾಡುವ ನಿರ್ಧಾರ ದೇಶ ವಿರೋಧಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿಬ್ಯಾಂಕ್‌ ಎದುರೇ ಗುಂಡಿಕ್ಕಿ ಪತ್ನಿ ಕೊಂದ ಲಕ್ನೋ SBI ಉದ್ಯೋಗಿ – ಮನೆಯಲ್ಲಿ ಸಹೋದರಿ ಕೊಂದು ತಾನೂ ಆತ್ಮಹತ್ಯೆಅಡಿಕೆ ತೋಟಕ್ಕೆ ನುಗ್ಗಿದ ಬಸ್‌ – ಓರ್ವ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್‌ – ತನಿಖೆಗೆ ಸುಪ್ರೀಂನಿಂದ ಉನ್ನತ ಮಟ್ಟದ ಸಮಿತಿ ರಚನೆವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ – ಪ್ರಾಂಶುಪಾಲರ ವಿರುದ್ಧ FIR