LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆ

Advertisement
Advertisement
Advertisement

ಕೋಲ್ಕತ್ತಾ: ಪಶ್ಚಿಮ ಬಂಗಾಳದ  ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ ಅವರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿಯಾದ 28 ವರ್ಷದ ಬೃಷ್ಟಿ ಮುಖರ್ಜಿ, ತಮ್ಮ ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಹಾರ್ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ತಾಯಿಯ ಸೋದರ ಸಂಬಂಧಿಯಾಗಿದ್ದು ತೃಣಮೂಲ ಕಾಂಗ್ರೆಸ್ ನಾಯಕರಾಗಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಸಾವಿನ ಕುರಿತು ತನಿಖೆ ಆರಂಭಿಸಲಾಗಿದೆ. ಯುವತಿಯು ಕಳೆದ ಕೆಲ ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಕಳೆದ 2023ರ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಆದೇಶಗಳನ್ನು ಉದ್ಯೋಗಕ್ಕಾಗಿ ಲಂಚ(Cash For Jobs) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ಉದ್ಯೋಗ ಕಳೆದುಕೊಂಡವರಲ್ಲಿ ಬೃಷ್ಟಿ ಮುಖರ್ಜಿ ಕೂಡ ಒಬ್ಬರಾಗಿದ್ದರು.

ಬೃಷ್ಟಿ ಮುಖರ್ಜಿ ಬೋಲ್‌ಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಪ್ರಕರಣದಲ್ಲಿ ಸುಮಾರು 26,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಲಾಗಿತ್ತು. ಈ ನೇಮಕಾತಿಗಳನ್ನು ಈ ಹಿಂದೆ ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ನಂತರ ಸುಪ್ರೀಂ ಕೋರ್ಟ್ ಕೂಡ ಆ ಆದೇಶವನ್ನು ಎತ್ತಿಹಿಡಿದಿತ್ತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮನ್ನು ನೀವೇ ದೇವರೆಂದುಕೊಂಡಿದ್ದೀರಾ? – FDA ಅಧಿಕಾರಿ ತುಕಾರಾಮ್‌ಗೆ ಬಾಂಬೆ ಹೈಕೋರ್ಟ್‌ ತರಾಟೆಐಸ್‌ಕ್ರೀಮ್‌ ಮಾರುಕಟ್ಟೆಗೆ ರಿಲಯನ್ಸ್‌ ಎಂಟ್ರಿ – 10 ರೂ.ಗೆ ಬಾಂಬೆ ಕ್ರೀಮರಿಅಗತ್ಯ ಇದ್ದರಷ್ಟೇ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ ಬೇಡ: ಮೋದಿ ಮಿತವ್ಯಯ ಕರೆಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆದರ್ಶನ್‌ಗೆ ಮತ್ತೆ ಢವ ಢವ – ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲುಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ ಭೇಟಿ – ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಟ ಝೈದ್ ಖಾನ್ ಸಾಥ್ಸೆ.3, 4 ರಂದು ಚಿಕನ್‌ ಶಾಪ್‌ ಬಂದ್‌ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟುಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ವಿಜಯೇಂದ್ರ