LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಜಿನ ನಗರಿ ಮಡಿಕೇರಿ ದಸರಾಕ್ಕೆ 2 ಕೋಟಿ ಘೋಷಿಸಿದ ರಾಜ್ಯ ಸರ್ಕಾರ

Advertisement
Advertisement
Advertisement

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ದಸರಾ ಸಮಿತಿಯ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಬೆನ್ನಲ್ಲೇ ಘೋಷಣೆ ಹೊರಬಿದ್ದಿದೆ.

ಮಡಿಕೇರಿಯ ಐತಿಹಾಸಿಕ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಅನುದಾನ ಘೋಷಿಸಿದೆ. ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಅವರ ನೇತೃತ್ವದಲ್ಲಿ ದಸರಾ ಸಮಿತಿಯ ಪದಾಧಿಕಾರಿಗಳು ಹಾಗೂ ದಶ ಮಂಟಪ ಸಮಿತಿಯ ಪ್ರತಿನಿಧಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ದಸರಾಗೆ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಡಿಕೇರಿ ನಗರ ದಸರಾ ಆಚರಣೆಗೆ 2 ಕೋಟಿ ರೂ. ಅನುದಾನ ಮಂಜೂರು ಮಾಡುವುದಾಗಿ ಘೋಷಿಸಿದ್ದಾರೆ. 

ಈ ಘೋಷಣೆಯಿಂದ ದಸರಾ ಸಿದ್ಧತೆಗಳಿಗೆ ಮತ್ತಷ್ಟು ವೇಗ ಸಿಗಲಿದ್ದು, ಸಮಿತಿಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST