LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ

ಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಜೂನ್ 1ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಮೇ 29ರಂದು ಉದ್ಯಮಬಾಗದ ಚೆಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಸಭಾಭವನದಲ್ಲಿ ನಡೆದ ಎಲ್ಲಾ ವ್ಯಾಪಾರ ಮತ್ತು ಕೈಗಾರಿಕಾ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜಂಟಿ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರದ ಕ್ರಮದ ವಿರುದ್ಧ ಜಿಲ್ಲಾಡಳಿತದ ಮೂಲಕ  ಆಕ್ಷೇಪಣೆ ಸಲ್ಲಿಸಲು ನಿರ್ಧರಿಸಲಾಗಿದೆ.

ಜೂನ್ 1ರಂದು (ಸೋಮವಾರ) ಬೆಳಿಗ್ಗೆ 10.30 ಗಂಟೆಗೆ ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಮತ್ತು ಕಾರ್ಯದರ್ಶಿ ಸತೀಶ್ ಕುಲಕರ್ಣಿ ತಿಳಿಸಿದ್ದಾರೆ.

ಪ್ರತಿಭಟನೆ ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ವ್ಯಾಪಾರ ಮತ್ತು ಕೈಗಾರಿಕಾ ಸಂಘಗಳ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಕರೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ವ್ಯಾಪಾರ ಮತ್ತು ಕೈಗಾರಿಕಾ ವಲಯದ ಏಕತೆ ಹಾಗೂ ಸಾಮೂಹಿಕ ವಿರೋಧವನ್ನು ಸರ್ಕಾರದ ಗಮನಕ್ಕೆ ತರಬೇಕೆಂದು ಮನವಿ ಮಾಡಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೇಸ್​ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರುಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿಡಿಕೆಶಿ ಅವಧಿಯಲ್ಲಾದರೂ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್