LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್‌ಆರ್‌ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ

Advertisement
ಗೋಕಾಕ: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು.
news_1782318167_0_237.webp

 

ನಗರದ ಹಿಲ್‌ ಗಾರ್ಡನ್‌ ನಲ್ಲಿ ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ರಿವಾರ್ಡ್ ಮತ್ತು ಆತ್ಮ ಯೋಜನೆಗಳ ಅಡಿಯಲ್ಲಿ ಹಮ್ಮಿಕೊಳ್ಳಲಾದ ಎಲ್‌ಆರ್‌ಐ ಯಾತ್ರೆ ಹಾಗೂ “ಖೇತ್ ಬಚಾವೋ” ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್‌ಆರ್‌ಐ ಯಾತ್ರೆ ಹಾಗೂ ಖೇತ್ ಬಚಾವೋ ಅಭಿಯಾನದ ಮೂಲಕ ರೈತರಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಮಳೆನೀರಿನ ಸಂರಕ್ಷಣೆ, ಭೂ ಕುಸಿತ ತಡೆ, ಜಲಾನಯನ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮಗಳು ರೈತರ ಆದಾಯ ಹೆಚ್ಚಳಕ್ಕೆ ಹಾಗೂ ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ರಿವಾರ್ಡ್ ಮತ್ತು ಆತ್ಮ ಯೋಜನೆಗಳಡಿ ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ತರಬೇತಿ ಶಿಬಿರಗಳು ಹಾಗೂ ಕ್ಷೇತ್ರ ಪ್ರದರ್ಶನಗಳನ್ನು ಆಯೋಜಿಸಿ ರೈತರಿಗೆ ಅಗತ್ಯ ಮಾಹಿತಿ ಮತ್ತು ತಾಂತ್ರಿಕ ಮಾರ್ಗದರ್ಶನ ಒದಗಿಸಲಾಗುವುದು ಎಂದು ಇದೇ ವೇಳೆ ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ಎಲ್‌ಆರ್‌ಐ ಯಾತ್ರೆ ಹಾಗೂ “ಖೇತ್ ಬಚಾವೋ” ಅಭಿಯಾನದ ಅಂಗವಾಗಿ ಜಾಗೃತಿ ವಾಹನಕ್ಕೆ ಸಚಿವರು ಹಸಿರು ನಿಶಾನೆ ತೋರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಖ್ಯಾತ ವೈದ್ಯ ಡಾ. ಗಿರೀಶ್‌ ಸೋನವಾಲಕರ್‌, ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ. ಕೊಳೇಕರ್‌, ಬೆಳಗಾವಿ ಉಪ ಕೃಷಿ ನಿರ್ದೇಶಕ ಎನ್. ಎ. ಸಲೀಂ, ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಗೋಕಾಕ ಸಹಾಯಕ ಕೇಷಿ ನಿರ್ದೇಶಕ ಎಮ್ೆನ್.‌ ನದಾಫ್‌,  ಬೆಳಗಾವಿ ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಅಂಗಡಿ,   ಸೇರಿದಂತೆ ಕೃಷಿ ಮತ್ತು ಜಲಾನಯನ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು ಭಾಗವಹಿಸಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಲ್‌ಆರ್‌ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಗೂ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ - ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿಮತ್ತೆ ಸುಪ್ರೀಂ ಮೆಟ್ಟಿಲೇರಿದ ದರ್ಶನ್ – ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ ಆದೇಶ ಮಾರ್ಪಾಡಿಗೆ ಮನವಿ133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ಬಸವಕಲ್ಯಾಣದ ‘ಬಸವಾದಿ ಶರಣರ ಹಿಂದೂ ಸಮಾವೇಶ’ ರದ್ದತಿಗೆ ಬಸವಪರ ಸಂಘಟನೆಗಳ ಒತ್ತಾಯಉಚಗಾಂವ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಬೆನಕನಹಳ್ಳಿಯಲ್ಲಿ ದೇವಸ್ಥಾನ ಮೇಲ್ಚಾವಣಿ ಕಾಮಗಾರಿಗೆ ಚಾಲನೆಬೈಕ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ:  ಓರ್ವ ಸಾವುಒಂದೇ ತಿಂಗಳಲ್ಲಿ 2ನೇ ಬಾರಿ ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಪೈಪ್‌ ಕಳ್ಳತನ – ಆಪರೇಷನ್ ಥಿಯೇಟರ್ ಬಂದ್