LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕಾರಿಗೆ ತೆರಳಿದ್ದಾಗ ಮಿಸ್‌ಫೈರ್ – ಯುವಕ ಸಾವು, ಮೂವರ ಬಂಧನ, ಮೂವರು ನಾಪತ್ತೆ

Advertisement

ಚಿಕ್ಕಮಗಳೂರು: ರಾತ್ರಿ ವೇಳೆ ಶಿಕಾರಿಗೆ  ತೆರಳಿದ್ದಾಗ ಮಿಸ್‌ಫೈರ್ ಆಗಿ ಯುವಕ ಸಾವನ್ನಪ್ಪಿರುವ ಘಟನೆ ಕೊಪ್ಪ  ತಾಲೂಕಿನ ಕಾಡಂಚಿನ ಗ್ರಾಮವಾದ ಕಡೇಮನೆಯಲ್ಲಿ ನಡೆದಿದೆ.

ಗ್ರಾಮದ ಚೇತನ್ ಗುಂಡು ಬಿದ್ದು ಸಾವನ್ನಪ್ಪಿದ ಯುವಕ. ಸೆ.30 ರ ರಾತ್ರಿ 7 ಜನ ಸ್ನೇಹಿತರು ಅರಣ್ಯಕ್ಕೆ ಬೇಟೆ ತೆರಳಿದ್ದರು. ಬೇಟೆ ವೇಳೆ ಪ್ರಾಣಿ ಮೇಲೆ ಗುಂಡು ಹಾರಿಸುವಾಗ ಮಿಸ್ ಫೈರ್ ಆಗಿ ಜೊತೆಗಿದ್ದ ಚೇತನ್‌ಗೆ ಗುಂಡು ಬಿದ್ದಿದೆ. ಜೊತೆಗಿದ್ದ ಸ್ನೇಹಿತರು ಕೂಡಲೇ ಆತನನ್ನ ಜಯಪುರ ಆಸ್ಪತ್ರೆಗೆ ದಾಖಲಿಸಲು ಕರೆತಂದರೂ ಕೂಡ ಹೊಟ್ಟೆ ಭಾಗಕ್ಕೆ ಗುಂಡು ತಗುಲಿದ್ದ ಕಾರಣ ಚೇತನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. 

ಏಳು ಜನರಲ್ಲಿ ಚೇತನನ್ನ ಆಸ್ಪತ್ರೆಗೆ ಕರೆತಂದ ಮೂವರು ಯುವಕರನ್ನ ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಗುಂಡು ಹಾರಿಸಿದ ಉಳಿದ ಮೂವರು ನಾಪತ್ತೆಯಾಗಿದ್ದಾರೆ. ತಲೆಮರೆಸಿಕೊಂಡಿರುವ ಮೂವರಿಗೆ ಪೊಲೀಸರು ಬಲೇ ಬೀಸಿದ್ದಾರೆ.

ಜಯಪುರ ಆಸ್ಪತ್ರೆ ಮುಂಭಾಗ ಎದೆ ಮಟ್ಟದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ತನಿಖೆ ಬಳಿಕ ಫೈರ್ ಉದ್ದೇಶಪೂರ್ವಕವಾಗಿ ಆಗಿರೋದಾ ಅಥವಾ ಮಿಸ್ ಆಗಿ ಆಗಿರೋದಾ ಎಂಬುದು ಸ್ಪಷ್ಟವಾಗಲಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮಸ್ಥರೊಂದಿಗೆ ಲಕ್ಷ್ಮೀ ಹೆಬ್ಬಾಳಕರ್ ಅಭಿವೃದ್ಧಿ ಸಂವಾದಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಮುರಘೇಂದ್ರಗೌಡ ಪಾಟೀಲಮಹಾತ್ಮ ಗಾಂಧೀಜಿ ಜಯಂತಿ ಪಂಚಾಯಿತಿ ಅಧಿಕಾರಿಗಳ ಗೈರುಹಾಜರಿಹಾವೇರಿ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಇಲ್ಲದೆ ಬಡರೋಗಿಗಳ ಪರದಾಟಚುನಾವಣಾ ಆಯೋಗದ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡಿಯೇ ಇಲ್ಲ: ಡಿಕೆಶಿನೀವೆಲ್ಲ ಗಲಾಟೆ ಮಾಡೋಕೆ ಬಂದಿದ್ದೀರಾ? – ಶ್ರೇಯಸ್‌ ಪಟೇಲ್ ಬೆಂಬಲಿಗರ ಮೇಲೆ ಶಿವಲಿಂಗೇಗೌಡ ಗರಂಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹಪರಿಷ್ಕರಣೆ ಬಳಿಕ 1 ತಿಂಗಳಲ್ಲಿ 1.37 ಲಕ್ಷ ಮತದಾರರ ಹೆಚ್ಚಳ – ರಾಜ್ಯದಲ್ಲಿ 84,900 ಫಾರ್ಮ್‌ 7 ಸಲ್ಲಿಕೆಕಿಡ್ನ್ಯಾಪ್‌ ನಾಟಕವಾಡಿ 90 ಲಕ್ಷಕ್ಕೆ ಡಿಮ್ಯಾಂಡ್‌ – ತಂದೆಗೆ ಯಾಮಾರಿಸಲು ಯತ್ನಿಸಿದ ಮಗ ಅರೆಸ್ಟ್‌