LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ

Advertisement
Advertisement
Advertisement

ಬೆಳಗಾವಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಎಂಎಲ್‌ಸಿ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಸಾರ್ವಜನಿಕರು ಸಲ್ಲಿಸಿದ್ದ ವಿವಿಧ ಅರ್ಜಿಗಳನ್ನು ಪರಿಶೀಲಿಸಿದರು.ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳು, ವಿವಿಧ ಸೌಲಭ್ಯಗಳ ಪಡೆಯುವಿಕೆ, ಸ್ಥಳೀಯ ಮೂಲಸೌಕರ್ಯ, ಕಂದಾಯ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಸಮಸ್ಯೆಗಳ ಸ್ವರೂಪ ಹಾಗೂ ಸಂಬಂಧಿಸಿದ ಇಲಾಖೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಸಾಧ್ಯವಿರುವ ಕಡೆಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.ಇನ್ನು ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ನಿರ್ಲಕ್ಷಿಸದೆ, ಅವುಗಳ ಕುರಿತು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಭರವಸೆ ನೀಡಿದರು.


ತಮ್ಮ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿಯ ಮುಂದೆ ಹೇಳಿಕೊಳ್ಳಲು ಅವಕಾಶ ದೊರೆತ ಹಿನ್ನೆಲೆಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು. ತಮ್ಮ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರದ ದಾರಿ ತೋರಿಸಿದ ಚನ್ನರಾಜ ಹಟ್ಟಿಹೊಳಿ ಅವರಿಗೆ ಸಾರ್ವಜನಿಕರು ಕೃತಜ್ಞತೆ ಸಲ್ಲಿಸಿದರು.ಜನರ ಸಮಸ್ಯೆಗಳನ್ನು ಆಲಿಸುವುದು ಹಾಗೂ ಅವುಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯ ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಚನ್ನರಾಜ ಹಟ್ಟಿಹೊಳಿ ಅವರು ಆದ್ಯತೆ ನೀಡುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ