LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್

ನವದೆಹಲಿ: ಕೇಂದ್ರದ ಮೋದಿ ಕ್ಯಾಬಿನೆಟ್ ಕೂಡ ಜೂನ್ 15 ರಿಂದ 18 ರ ನಡುವೆ ಪುನಾರಚನೆ ಆಗುವ ಸಾಧ್ಯತೆ ಇದೆ.

ಮುಂಬರುವ ನಿರ್ಣಾಯಕ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿ ನಾಯಕತ್ವವು ರಾಜಕೀಯ ಮತ್ತು ಸಾಂಸ್ಥಿಕ ಪುನಾರಚನೆಗೆ ಸಿದ್ಧವಾಗ್ತಿದೆ. ಹೀಗಾಗಿ, ಹಲವಾರು ರಾಜ್ಯ ಸಚಿವರು ಸೇರಿದಂತೆ 1 ಡಜನ್‌ಗೂ ಹೆಚ್ಚು ಸಚಿವರನ್ನು ಕೈಬಿಡಬಹುದು ಅಥವಾ ಬದಲಾಯಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. 

ಪುನಾರಚನೆಯು 10-12 ಸಚಿವಾಲಯಗಳಲ್ಲಿ ನಾಯಕತ್ವ ಬದಲಾವಣೆಗಳನ್ನು ಒಳಗೊಂಡಿದ್ದು, ಹಲವಾರು ಸಚಿವರನ್ನು ವಿಭಿನ್ನ ಖಾತೆಗಳಿಗೆ ಮರು ನಿಯೋಜಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು, ಟಿಡಿಪಿ, ಎನ್‌ಸಿಪಿ ಮತ್ತು ಆರ್‌ಎಲ್‌ಎಂಗಳು ಸಂಪುಟದಲ್ಲಿ ಪ್ರಾತಿನಿಧ್ಯವನ್ನು ಪಡೆಯಬಹುದು ಎನ್ನಲಾಗಿದೆ.

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರನ್ನು ಉತ್ತರ ಪ್ರದೇಶಕ್ಕೆ ಬಿಜೆಪಿ ಮುಖ್ಯಸ್ಥರನ್ನಾಗಿ, ಕಾರ್ಪೊರೇಟ್ ವ್ಯವಹಾರಗಳು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ ಅವರನ್ನು ದೆಹಲಿ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸ್ಥಾನಗಳನ್ನು ಸಂಸತ್ತಿನ ಎರಡೂ ಸದನಗಳ ಹೊಸಬರಿಗೆ ನೀಡುವ ನಿರೀಕ್ಷೆಯಿದೆ. 

 
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೇಸ್​ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರುಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿಡಿಕೆಶಿ ಅವಧಿಯಲ್ಲಾದರೂ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್