LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಕೊರತೆ ಎಫೆಕ್ಟ್: ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತ

Advertisement
Advertisement

ಮಡಿಕೇರಿ : ಮುಂಗಾರು ಮಳೆ (Monsoon) ಕೊರತೆಯಿಂದ ಕೊಡಗು ಜಿಲ್ಲೆಯ ಏಕೈಕ ಜಲಾಶಯವಾದ ಹಾರಂಗಿ ಜಲಾಶಯದ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ.

ಮಳೆಗಾಲ ಶುರುವಾಗಿದ್ದರೂ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಸೋಮವಾರದಿಂದ ಉರಿ ಬಿಸಿಲು ಹೆಚ್ಚಾಗಿದ್ದು, ಮಳೆಗಾಲದಲ್ಲಿಯೇ ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಇದರ ಪರಿಣಾಮ ಹಾರಂಗಿ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ.

ಪ್ರಸ್ತುತ ಹಾರಂಗಿ ಜಲಾಶಯದ ಒಳಹರಿವು 285 ಕ್ಯೂಸೆಕ್ ಮಾತ್ರ. ಜಲಾಶಯದಿಂದ 180 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಜಲಾಶಯಕ್ಕೆ 4,736 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 4,583 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಒಳಹರಿವು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಹಾರಂಗಿ ಜಲಾಶಯದ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 8.5 ಟಿಎಂಸಿ ಇದೆ. ಆದರೆ ಪ್ರಸ್ತುತ ಜಲಾಶಯದಲ್ಲಿ ಕೇವಲ 3.0 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಮಳೆ ಕೊರತೆ ಮುಂದುವರಿದರೆ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿರುವುದು ಸೋಮವಾರಪೇಟೆ, ಹಾಸನ ಹಾಗೂ ಮೈಸೂರು ಭಾಗದ ಗ್ರಾಮೀಣ ಪ್ರದೇಶಗಳಲ್ಲೂ ಚಿಂತೆ ಮೂಡಿಸಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾವೇರಿ ನದಿಯ ನೀರಿನ ಲಭ್ಯತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಕೊರತೆ ಎಫೆಕ್ಟ್: ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ – ಪೋಕ್ಸೊ ಪ್ರಕರಣ ದಾಖಲು, ಕಿರಾತಕ ಅರೆಸ್ಟ್‌66 ರೌಡಿಗಳಿಗೆ ಮುಕ್ತಿ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಕಮಿಷನರ್ಬಾಲಕಿ ವೆನ್ನಿಲಾ ಕೊಲೆ ಕೇಸ್‌ – ಪ್ರಿಯಾಂಕಾಳ ಸುಳ್ಳುಪತ್ತೆ ಪರೀಕ್ಷೆಗೆ ಸಿದ್ಧತೆಪ್ರಿಯಾಂಕ್ ಖರ್ಗೆ RSS ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ: ಸಿ.ಟಿ ರವಿಬಿಡದಿ ಟೌನ್ ಶಿಪ್‌ಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್ ಕೊಟ್ಟಿದ್ದರೆ ದಾಖಲಾತಿ ಬಹಿರಂಗ ಮಾಡಿ- ಛಲವಾದಿ ನಾರಾಯಣಸ್ವಾಮಿಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್‌ ಮರು ಪರೀಕ್ಷೆಗೂ ಮುನ್ನ ಕೇಂದ್ರ ಆದೇಶನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಲೆಕ್ಕ ಕೊಡಬಾರದ?: ಪ್ರಿಯಾಂಕ್‌ ಖರ್ಗೆಧರ್ಮಸ್ಥಳ ಬುರುಡೆ ಕೇಸ್‌ – ತನಿಖಾ ತಂಡದ ಕಾರು ಚಾರ್ಮಾಡಿಯಲ್ಲಿ ಪಲ್ಟಿಟೈರ್ ಬ್ಲಾಸ್ಟ್ ಆಗಿ ಬಸ್ಸಿಗೆ ಟಿಪ್ಪರ್ ಡಿಕ್ಕಿ – ಮೂವರು ದುರ್ಮರಣ, 10 ಮಂದಿಗೆ ಗಾಯ