LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾದಯಾತ್ರೆಗೆ ಬಿಜೆಪಿಯಿಂದ ನೈತಿಕ ಬೆಂಬಲ -ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖಂಡರು ಭಾಗಿ: ಹೆಚ್‌ಡಿಕೆ

Advertisement
Advertisement

ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ  ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ  ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ  ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ಜೆಡಿಎಸ್ ಮತ್ತು ಬಿಜೆಪಿ (BJP) ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು‌. ಈ ವೇಳೆ, ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ ಎಂದು ಅವರು ಹೇಳಿದರು. 

ಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎರಡೂ ಪಕ್ಷಗಳ ನಡುವೆ ಸಮನ್ವಯ ಕೊರತೆ ಆಗಬಾರದು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡದಿ ಪಾದಯಾತ್ರೆ ನಡೆಯುತ್ತಿದೆ. ನಾನೇ ಪಾದಯಾತ್ರೆಗೆ ಚಾಲನೆ ನೀಡುತ್ತೇನೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ ಎಂದು ಕಟುವಾಗಿ ಟೀಕಿಸಿದರು.

ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ಬಿಡದಿ ವಿಚಾರದಲ್ಲಿ ಸದನದಲ್ಲೂ ಚರ್ಚೆ ಆಗಲೇಬೇಕು. ರೈತರ ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ನೋಡುತ್ತಿದೆ. ರೈತರು ಭೂಮಿ ಕೊಡಲು ತಯಾರಿಲ್ಲ. ಕೇವಲ ರೈತರ ಭೂಮಿಯನ್ನು ಲೂಟಿ ಒಡೆಯಲು ಯೋಜನೆಯನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ.

ಇದಲ್ಲದೆ ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿಯ ಎತ್ತುತ್ತವೆ.

ಸಭೆಯಲ್ಲಿ ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಲೋಕಸಭೆ ಸದಸ್ಯ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಮಾಜಿ ಸಚಿವ ಸಿ.ಸಿ. ಪಾಟೀಲ್ ಮುಂತಾದವರು ಭಾಗಿಯಾಗಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಗಲು ವಿಶ್ರಾಂತಿ, ರಾತ್ರಿ ವೇಳೆ ಪುಂಡಾಟ – ಸಿಕ್ಕಸಿಕ್ಕ ವಾಹನ, ಜನರ ಮೇಲೆ ʻಗಜಾಸುರʼನ ಅಟ್ಟಹಾಸಹಗಲು ವಿಶ್ರಾಂತಿ, ರಾತ್ರಿ ವೇಳೆ ಪುಂಡಾಟ – ಸಿಕ್ಕಸಿಕ್ಕ ವಾಹನ, ಜನರ ಮೇಲೆ ʻಗಜಾಸುರʼನ ಅಟ್ಟಹಾಸಪಾದಯಾತ್ರೆಗೆ ಬಿಜೆಪಿಯಿಂದ ನೈತಿಕ ಬೆಂಬಲ -ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖಂಡರು ಭಾಗಿ: ಹೆಚ್‌ಡಿಕೆಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ರಾಘವೇಂದ್ರಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ರಸ್ತೆ ಅಪಘಾತ – ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಮೇಳಕ್ಕೆ ಈಶ್ವರ ಖಂಡ್ರೆ ಸೂಚನೆಸ್ನ್ಯಾಕ್ಸ್ ಪ್ಯಾಕೆಟ್‌ಗಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿ ಅರೆಸ್ಟ್ಹೋಟೆಲ್‌ಗಳ ಮೇಲೆ ಮುಂದುವರೆದ ಫುಡ್ ಸೇಫ್ಟಿ ರೇಡ್; 26 ಕಡೆ ದಾಳಿ, 11 ರೆಸ್ಟೋರೆಂಟ್‌ಗಳಿಗೆ ನೋಟಿಸ್ಅಧಿಕಾರ ಕೊಟ್ಟವರು ಮುಖ್ಯಮಂತ್ರಿಗಳು, ಅವ್ರು ಹೇಳಿದ ಹಾಗೆ ಕೇಳ್ತೀನಿ: ಅಧಿಕಾರ ವಾಪಸ್ ಪ್ರಶ್ನೆಗೆ ಬಾಲಕೃಷ್ಣ ರಿಯಾಕ್ಷನ್ನಮಗೆ ನಿಮ್ಮ ಮೇಲೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅಗತ್ಯವಿದೆ – ʻಕಾಕ್ರೋಚ್‌ʼ ಪ್ರತಿಭಟನೆ ಬಳಿಕ ಜೆನ್-ಝಿ ಉದ್ದೇಶಿಸಿ ಪ್ರಧಾನಿಯ ಮೊದಲ ಭಾಷಣ