LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ರಾಘವೇಂದ್ರ

Advertisement
Advertisement

ಶಿವಮೊಗ್ಗ: ​ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು , ಶಿಕಾರಿಪುರr ತಾಲೂಕಿನ ರೈತರ  ಜೀವನಾಡಿ ಎನಿಸಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದೆ. ಡ್ಯಾಮ್‌ ಭರ್ತಿಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ  ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ನದಿಗೆ ಬಾಗಿನ ಅರ್ಪಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ, ಜಲಾಶಯ ಭರ್ತಿಯಾಗಿ ಕೋಡಿ ಬೀಳುತ್ತಿರುವುದು ಅತ್ಯಂತ ಸಂತಸದ ವಿಷಯ. ​ಇಂದು ಈ ಪವಿತ್ರ ಜಲಾಶಯಕ್ಕೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು ಎಂದು ಬರೆದುಕೊಂಡಿದ್ದಾರೆ. 

​ವರುಣದೇವನ ಕೃಪೆಯಿಂದ ಶಿಕಾರಿಪುರ ತಾಲೂಕು ಸೇರಿದಂತೆ ನಮ್ಮ ಶಿವಮೊಗ್ಗ ಜಿಲ್ಲೆಯಾದ್ಯಂತ ಕೃಷಿ ಸಮೃದ್ಧಿ ಹೆಚ್ಚಲಿ. ಪ್ರತಿಯೊಬ್ಬ ರೈತ ಕುಟುಂಬದಲ್ಲೂ ಸುಖ, ಶಾಂತಿ ಮತ್ತು ಸಂತಸ ನೆಲೆಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಇದೇ ವೇಳೆ ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ಶಿಕಾರಿಪುರ ಪಟ್ಟಣದಲ್ಲಿರುವ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಗಲು ವಿಶ್ರಾಂತಿ, ರಾತ್ರಿ ವೇಳೆ ಪುಂಡಾಟ – ಸಿಕ್ಕಸಿಕ್ಕ ವಾಹನ, ಜನರ ಮೇಲೆ ʻಗಜಾಸುರʼನ ಅಟ್ಟಹಾಸಹಗಲು ವಿಶ್ರಾಂತಿ, ರಾತ್ರಿ ವೇಳೆ ಪುಂಡಾಟ – ಸಿಕ್ಕಸಿಕ್ಕ ವಾಹನ, ಜನರ ಮೇಲೆ ʻಗಜಾಸುರʼನ ಅಟ್ಟಹಾಸಪಾದಯಾತ್ರೆಗೆ ಬಿಜೆಪಿಯಿಂದ ನೈತಿಕ ಬೆಂಬಲ -ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖಂಡರು ಭಾಗಿ: ಹೆಚ್‌ಡಿಕೆಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ರಾಘವೇಂದ್ರಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ರಸ್ತೆ ಅಪಘಾತ – ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಮೇಳಕ್ಕೆ ಈಶ್ವರ ಖಂಡ್ರೆ ಸೂಚನೆಸ್ನ್ಯಾಕ್ಸ್ ಪ್ಯಾಕೆಟ್‌ಗಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿ ಅರೆಸ್ಟ್ಹೋಟೆಲ್‌ಗಳ ಮೇಲೆ ಮುಂದುವರೆದ ಫುಡ್ ಸೇಫ್ಟಿ ರೇಡ್; 26 ಕಡೆ ದಾಳಿ, 11 ರೆಸ್ಟೋರೆಂಟ್‌ಗಳಿಗೆ ನೋಟಿಸ್ಅಧಿಕಾರ ಕೊಟ್ಟವರು ಮುಖ್ಯಮಂತ್ರಿಗಳು, ಅವ್ರು ಹೇಳಿದ ಹಾಗೆ ಕೇಳ್ತೀನಿ: ಅಧಿಕಾರ ವಾಪಸ್ ಪ್ರಶ್ನೆಗೆ ಬಾಲಕೃಷ್ಣ ರಿಯಾಕ್ಷನ್ನಮಗೆ ನಿಮ್ಮ ಮೇಲೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅಗತ್ಯವಿದೆ – ʻಕಾಕ್ರೋಚ್‌ʼ ಪ್ರತಿಭಟನೆ ಬಳಿಕ ಜೆನ್-ಝಿ ಉದ್ದೇಶಿಸಿ ಪ್ರಧಾನಿಯ ಮೊದಲ ಭಾಷಣ