LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

Advertisement
Advertisement

ಬೆಂಗಳೂರು: ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ(Ganesh Idol) ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಪ್ರೇರೇಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಕಾರ್ಯದರ್ಶಿಯವರಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಗಣೇಶ ಪರಿಸರದಿಂದ (ಮಣ್ಣಿನಿಂದ) ಹುಟ್ಟಿದ ದೇವರಾಗಿದ್ದು, ಜಲ ಮೂಲಗಳ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅವಕಾಶ ನೀಡುವಂತೆ ಕ್ರಮ ವಹಿಸಲು ತಿಳಿಸಿದ್ದಾರೆ.

ಹಬ್ಬದ ಸಂಭ್ರಮದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವಾಗದ ರೀತಿಯಲ್ಲಿ ಈಗಿನಿಂದಲೇ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನೆರವು ಪಡೆಯುವಂತೆ ಸೂಚಿಸಿರುವ ಅವರು, ಸಾರ್ವಜನಿಕರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪಂಚಾಯತಿಗಳ ಮಟ್ಟದಲ್ಲಿ ಮಾಡಲು ಆದೇಶ ನೀಡಿದ್ದಾರೆ. 

ಕ್ಯಾಲ್ಷಿಯಂ, ಸಲ್ಫೇಟ್, ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ತಯಾರಿಸುವ ಮೂರ್ತಿಗಳಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುವುದರ ಜೊತೆಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸುವುದರಿಂದ ಪರಿಸರಕ್ಕೆ ಹಾನಿಕಾರಕವಾಗಿರುತ್ತದೆ ಎಂದೂ ಲಿಖಿತ ಸೂಚನೆಯಲ್ಲಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಪಿಓಪಿ ಮೂರ್ತಿಗಳನ್ನು ಕೆರೆ, ಬಾವಿ, ನದಿ ಸೇರಿದಂತೆ ಜಲ ಮೂಲಗಳಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆ 1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ನದಿ, ಸರೋವರ, ಕೆರೆ, ಕಟ್ಟೆ, ಬಾವಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದ್ದಾರೆ.

ಪರಿಸರಕ್ಕೆ ಮಾರಕವಾದ ಪಿಓಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ, ರಾಜ್ಯ ಘನ ಹೈಕೋರ್ಟ್ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿರುತ್ತದೆ ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಲ ಮೂಲಗಳ ಹಾಗೂ ಪರಿಸರ ರಕ್ಷಣೆಗೆ ಕ್ರಮ ವಹಿಸುವಂತೆ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನತಿಮ್ಮಾಪುರ್-ನಂಜಯ್ಯಮಠ ಆಡಿಯೋ ಬಗ್ಗೆ ಛಲವಾದಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ: ಛಲವಾದಿ ನಾರಾಯಣಸ್ವಾಮಿʻಕೆಲಸ ಮಾಡದಿದ್ರೆ, ಸಂಬಳ ಇಲ್ಲʼ – ಮುಷ್ಕರ ಹಿಂಪಡೆಯುವಂತೆ ವೈದ್ಯರಿಗೆ ಬಾಂಬೆ ಹೈಕೋರ್ಟ್‌ ಖಡಕ್ ಸೂಚನೆಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆಮುಳ್ಳಯ್ಯನಗಿರಿ ಬಳಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ – ಕೂದಲೆಳೆ ಅಂತರದಲ್ಲಿ ಪ್ರವಾಸಿಗ ಬಚಾವ್‌ನಾನು ಡಿಕೆಶಿ ಮನೆಮಗ, ನಾನೇ ಸಿಎಂ ಇದ್ದಂತೆ: ಶಿವಗಂಗಾ ಬಸವರಾಜ್ಕಾಂಗ್ರೆಸ್‌ನಿಂದ ಸಾಂವಿಧಾನಿಕ ಹುದ್ದೆ ಹೈಜಾಕ್‌- ಆ.14ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ: ಬಸವರಾಜ ಹೊರಟ್ಟಿಉಪಮುಖ್ಯಮಂತ್ರಿಗಳಾದಡಾ. ಜಿ. ಪರಮೇಶ್ವರ್ ಅವರ ಜನ್ಮದಿನದ ಅಂಗವಾಗಿ   ಸರ್ಕಾರಿ ವಸತಿ ಶಾಲೆಗಳಿಗೆ ಗೌತಮ ಬುದ್ಧ ಪ್ರತಿಮೆಗಳ ವಿತರಣೆಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ; ಪ್ರಕರಣದ ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ