LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಚೇರಿ ಅಲೆದಾಟಕ್ಕೆ ಇನ್ಮುಂದೆ ಬ್ರೇಕ್!

Advertisement
Advertisement
Advertisement
ಬೆಳಗಾವಿ:ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿ ಇನ್ನು ಮುಂದೆ ನಿರ್ಮಾಣವಾಗಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ಪಂದಿಸಿ, ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಧರ್ಮಟ್ಟಿ ಗ್ರಾಮದಲ್ಲಿ ಶನಿವಾರ ತಾಲೂಕು ಆಡಳಿತ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಹೊಸ ಪ್ರಜಾಸೇವೆ ವ್ಯವಸ್ಥೆ ಕೇವಲ ಅರ್ಜಿ ಸ್ವೀಕರಿಸುವ ಕಾರ್ಯಕ್ರಮವಾಗದೆ, ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಪರಿಣಾಮಕಾರಿ ವೇದಿಕೆಯಾಗಬೇಕು ಎಂದರು.
“ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಜನರನ್ನು ಅಲೆದಾಡಿಸಬೇಡಿ. ಅವರ ಅರ್ಜಿಗಳನ್ನು ಪರಿಶೀಲಿಸಿ, ಸಾಧ್ಯವಾದಷ್ಟು ಬೇಗ ಕ್ರಮ ಕೈಗೊಳ್ಳಿ” ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಾಕಿ ಉಳಿದಿರುವ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಗ್ರಾಮಸ್ಥರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಹಂತ ಹಂತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಯೋಜನೆಗಳನ್ನು ರೂಪಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಜಾರಕಿಹೊಳಿ ಹೇಳಿದರು.
86 ಅರ್ಜಿಗಳು ಸ್ವೀಕಾರ
ಪ್ರಜಾಸೇವೆ ಆಂದೋಲನದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮುಂದಿಟ್ಟರು. ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 86 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಿ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ ಶ್ರೀಶೈಲ ಗುಡುಮೆ ತಿಳಿಸಿದರು.
 ತಹಶೀಲ್ದಾರ ಶ್ರೀಶೈಲ ಗುಡುಮೆ, ತಾ.ಪಂ. ಇಒ ಪ್ರಸನ್ನ ನೆರಳೇಕರ, ಅರಭಾವಿ ಸಿಡಿಪಿಓ ಯಲ್ಲಪ್ಪ ಗದಾಡಿ, ಹೆಸ್ಕಾಂ ಅಧಿಕಾರಿ ಎಂ.ಎಸ್. ನಾಗನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಮೂಡಲಗಿ ಪುರಸಭೆ ಮುಖ್ಯಾಧಿಕಾರಿ(ಪ್ರ) ಸಿ.ಬಿ. ಪಾಟೀಲ  ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೈ ಬೈ ಪಪ್ಪಾ ಎಂದು ಚೆನಾಬ್ ನದಿಗೆ ಜಿಗಿದ ಯುವತಿ – ವಿಡಿಯೋ ವೈರಲ್‌ವೈದ್ಯನಿಂದ ಯುವತಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ; FIR ದಾಖಲುರೀಲ್ಸ್‌ಗಾಗಿ 30 ಅಡಿ ಎತ್ತರದಿಂದ ಡ್ಯಾಂಗೆ ಜಿಗಿದ ವ್ಯಕ್ತಿ – ಎರಡೂ ಕಾಲುಗಳ ಮೂಳೆ ಮುರಿತಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ – 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದ ಎಫ್‌ಡಿಎ – ಚಿಕಿತ್ಸೆ ಫಲಿಸದೇ ಸಾವುಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆಕಚೇರಿ ಅಲೆದಾಟಕ್ಕೆ ಇನ್ಮುಂದೆ ಬ್ರೇಕ್!