LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ 6 ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು

ರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನ ಬಳಿಯ ಜಾಗದ ವಿವಾದ ಹಿನ್ನೆಲೆ ರಾಯರ ಜಪದ ಕಟ್ಟೆ ಬಳಿಯ 6 ಕೋಣೆಗಳು ಹಾಗೂ ಗೋಶಾಲೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 

ಪೊಲೀಸ್ ಅಧಿಕಾರಿಗಳ ರಕ್ಷಣೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಅರ್ಚಕರ ವಶದಲ್ಲಿದ್ದ ಕೋಣೆಗಳಿಗೆ ಬೀಗ ಹಾಕಿ ವಶಕ್ಕೆ ಪಡೆದಿದ್ದಾರೆ. ಸರ್ವೆ ನಂ.35, 37 ರ 2 ಎಕರೆ 33 ಗುಂಟೆ ಜಾಗಕ್ಕಾಗಿ ಮಂತ್ರಾಲಯ ರಾಯರ ಮಠ ಹಾಗೂ ಅರ್ಚಕರು, ರೈತರ ನಡುವೆ ವಿವಾದವಿತ್ತು.

ಮಂತ್ರಾಲಯ ರಾಯರ ಮಠಕ್ಕೆ  ಸರ್ಕಾರ ಈ ಜಾಗ ಮಂಜೂರು ಮಾಡಿದ್ದು, ಇದರ ವಿರುದ್ಧ ಜಪದ ಕಟ್ಟಿ ಬಿಚ್ಚಾಲಿ ಅಪ್ಪಣ್ಣಾಚಾರ್ಯ ಸೇವಾ ಟ್ರಸ್ಟ್ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯ ಅರ್ಜಿ ವಜಾಗೊಳಿಸಿದ್ದರಿಂದ ಕೋರ್ಟ್ ಸೂಚನೆಯಂತೆ ಅಧಿಕಾರಿಗಳು ಸ್ಥಳದ ಸರ್ವೆ ಇದೇ ಏಪ್ರಿಲ್ 13 ರಂದು ಮಾಡಿದ್ದರು. ಯಾವುದೇ ನೋಟಿಸ್ ನೀಡದೆ ಸರ್ವೆ ಮಾಡಲಾಗಿದೆ ಎಂದು ಉಳುಮೆ ಮಾಡುತ್ತಿದ್ದ ರೈತರು ಆಕ್ರೋಶ ಹೊರ ಹಾಕಿದ್ದರು.

ಈಗ ಏಕಾಏಕಿ ಕೋಣೆಗಳಿಗೆ ಬೀಗ ಹಾಕಲಾಗುತ್ತಿದೆ ಎಂದು ಅರ್ಚಕರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಜಾಗದ ಸರ್ವೆ ಮಾಡಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ರಾಯಚೂರು ಉಪ ವಿಭಾಗ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ರಾಯಚೂರು ತಹಶಿಲ್ದಾರ್‌ ಸುರೇಶ್ ವರ್ಮಾ ನೇತೃತ್ವದಲ್ಲಿ ಕೋಣೆಗಳಿಗೆ ಬೀಗ ಹಾಕಲಾಗಿದೆ. ಮಂತ್ರಾಲಯ ಮಠಕ್ಕೆ ಆಸ್ತಿಯನ್ನು ಒಪ್ಪಿಸಲಾಗುತ್ತಿದೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಯಾನವನಗಳಿಗೆ ಹೊಸ ಸ್ಪರ್ಶಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ನೇಮಕಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ 6 ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣ: ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಠಾಣೆಯಲ್ಲಿ ಮೊದಲ ದೂರು ದಾಖಲು!ದಾವಣಗೆರೆ | ಗುಡುಗು ಸಿಡಿಲು ಸಹಿತ ಭಾರೀ ಮಳೆ – ನೆಲಕಚ್ಚಿದ ಪರಂಗಿ, ಅಡಿಕೆ ಬೆಳೆಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIRಸದ್ಯಕ್ಕಿಲ್ಲ ಜಿಬಿಎ ಚುನಾವಣೆ – ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂ.ಬಿ ಪಾಟೀಲ್‌ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶ ಇಲ್ಲ: ಈಶ್ವರ ಖಂಡ್ರೆ