LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಜಿಸಿಇಟಿ ಫಲಿತಾಂಶ ಪ್ರಕಟ, ಶುಲ್ಕ ಕಟ್ಟಲು ಅ.19 ಕೊನೆ ದಿನ: ಕೆಇಎ

Advertisement

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಮಹತ್ವದ ಮಾಹಿತಿ ನೀಡಿದೆ. ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಸೀಟು ಪಡೆದ ಅಭ್ಯರ್ಥಿಗಳು ಅಕ್ಟೋಬರ್ 19ರೊಳಗೆ ಶುಲ್ಕ ಪಾವತಿಸಬೇಕು. ಅಕ್ಟೋಬರ್ 23ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಪಿಬಿ ಬಿಎಸ್ಸಿ ನರ್ಸಿಂಗ್ ಪ್ರವೇಶಕ್ಕೆ ಆಯ್ಕೆ ದಾಖಲಿಸಲು ಅವಕಾಶ
ಪಿಬಿ ಬಿಎಸ್ಸಿ ನರ್ಸಿಂಗ್ ಮತ್ತು ಎಎಚ್‌ಎಸ್ ಲ್ಯಾಟರಲ್ ಕೋರ್ಸ್‌ಗಳ ಪ್ರವೇಶಕ್ಕೆ ಇಚ್ಛೆ ಅಥವಾ ಆಯ್ಕೆಗಳನ್ನು ದಾಖಲಿಸಲು ಅಕ್ಟೋಬರ್ 19ರ ಬೆಳಗ್ಗೆ 11 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಅಕ್ಟೋಬರ್ 19ರ ಸಂಜೆ 4 ಗಂಟೆಗೆ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಬದಲಾಯಿಸಲು, ಹೊಸ ಆಯ್ಕೆಗಳನ್ನು ಸೇರಿಸಲು ಅಥವಾ ಈಗಾಗಲೇ ದಾಖಲಿಸಿರುವ ಆಯ್ಕೆಗಳನ್ನು ಅಳಿಸಲು ಅವಕಾಶ ನೀಡಲಾಗಿದೆ. ಈ ಪ್ರಕ್ರಿಯೆಗೆ ಅಕ್ಟೋಬರ್ 22ರ ಬೆಳಗ್ಗೆ 11 ಗಂಟೆಯವರೆಗೆ ಸಮಯವಿದೆ. ನಂತರ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೆಚ್. ಪ್ರಸನ್ನ ತಿಳಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಗಾರತಿ ಮಾದರಿ ಕಾವೇರಿ ಮಾತೆಗೆ ಆರತಿ; ಪೂಜೆ ನೆರವೇರಿಸಿದ ಸಿಎಂ ಡಿಕೆಶಿಕ್ಷೇತ್ರ ಪುನರ್‌ವಿಂಗಡನೆ ಮಸೂದೆ ಮಂಡನೆಗೆ ಮುನ್ನ ಸರ್ವಪಕ್ಷ ಸಭೆ ನಡೆಸಿ – ಮೋದಿಗೆ 4ನೇ ಬಾರಿಗೆ ಖರ್ಗೆ ಪತ್ರಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ಭಿಕ್ಷಾಟನೆ ಕಾಟ; ಇಬ್ಬರ ಬಂಧನಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು3 ಲಕ್ಷ ಲಂಚ ಪಡೆಯುವಾಗ ʻಲೋಕಾʼ ದಾಳಿ – ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಎಸ್‌ಐಟಿ ತನಿಖೆಯಾಗಲಿ: ಪ್ರಹ್ಲಾದ್ ಜೋಶಿ ಆಗ್ರಹಪಿಜಿಸಿಇಟಿ ಫಲಿತಾಂಶ ಪ್ರಕಟ, ಶುಲ್ಕ ಕಟ್ಟಲು ಅ.19 ಕೊನೆ ದಿನ: ಕೆಇಎರಾಜ್ಯಕ್ಕೆ 2ನೇ ಮಹಿಳಾ ರಾಜ್ಯಪಾಲರ ನೇಮಕ – ಹೊಸ ಉತ್ಸಾಹದೊಂದಿಗೆ ಒಟ್ಟಾಗಿ ಕೆಲಸ ಮಾಡೋಣ: ಸಿಎಂಹಾವು ಕಚ್ಚಿ ಎರಡು ವರ್ಷದ ಮಗು ದುರ್ಮರಣನೆಲಮಂಗಲ ಹೆದ್ದಾರಿಯಲ್ಲಿ ಹಿಟ್‌ & ರನ್‌ಗೆ ಕೇರಳದ ಯುವತಿ ಬಲಿ