LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು

Advertisement
Advertisement

ದಾವಣಗೆರೆ: ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ  ಪೋಕ್ಸೋ ಪ್ರಕರಣದಲ್ಲಿ ( POCSO case) ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಆ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜೂ.25 ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಚನಾನಂದ ಸ್ವಾಮೀಜಿಯ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿತ್ತು. ಅಲ್ಲದೇ ರೆಗ್ಯುಲರ್ ಜಾಮೀನು ಪಡೆಯಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಅದರಂತೆ ಇದೀಗ ವಚನಾನಂದ ಸ್ವಾಮೀಜಿ ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಜೂ.27 ರಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸ್ವಾಮೀಜಿಗೆ ಜಾಮೀನು ಮಂಜೂರಾದ ಹಿನ್ನಲೆ, ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಲೈಗಿಂಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ – ಹೆಚ್.ಡಿ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ವಿದೇಶಾಂಗ ನೀತಿ ಟ್ರಂಪ್‌ಗೆ ಅಡವಿಟ್ಟ ಮೋದಿ: ಪ್ರಿಯಾಂಕ್‌ ಟೀಕೆಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರುಬಿಡದಿ ಟೌನ್‌ಶಿಪ್‌ ಜಟಾಪಟಿ – ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು!ಶಿವಮೊಗ್ಗದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು – ಪ್ರಾಣಬಿಟ್ಟ ನವದಂಪತಿರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶಚಲಿಸುತ್ತಿದ್ದ ಟ್ರೈನ್‌ನಲ್ಲಿ ಪೂಜೆ – 3 ಲಕ್ಷಕ್ಕೂ ಹೆಚ್ಚಿನ ಬೆಲೆಗೆ ಖಾಸಗಿ ಕೋಚ್ ಬುಕ್ ಆಗಿತ್ತು: ರೈಲ್ವೇ ಇಲಾಖೆ ಸ್ಪಷ್ಟನೆ