LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ. ಜಾರ್ಜ್

Advertisement

ಬೆಂಗಳೂರು: ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಬೆಂಗಳೂರಿನ  ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು (ವಿತರಣೆ) ಮಾಡಲು ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಗೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂಧನ ಇಲಾಖೆ ಬಲಿಷ್ಠವಾಗಿದೆ. ನಮ್ಮ ಸರ್ಕಾರ ನಿಮ್ಮ (ನೌಕರರ) ಪರವಾಗಿದೆ. ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಆಕ್ಷೇಪಣೆ ಸಲ್ಲಿಸಿವೆ. ನಾವು ಯಾವುದೇ ಖಾಸಗಿ ಕಂಪನಿಗೆ ಕಡಿಮೆ ಇಲ್ಲ. ನೌಕರರು ಮತ್ತು ಅಧಿಕಾರಿಗಳ ಬೇಡಿಕೆಗಳಿಗೆ ಸ್ಪಂದಿಸಲಿದ್ದೇವೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ನಾವು ರಾಜ್ಯದ ಸೇವೆ ಮಾಡಲು ಬಂದವರು. ಇಲ್ಲಿ ಖಾಸಗೀಕರಣ ವಿಚಾರ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇಂಧನ ಇಲಾಖೆ ಈಗಾಗಲೇ ದೂರದೃಷ್ಟಿಯ ಯೋಜನೆಗಳನ್ನು ಸಿದ್ಧಪಡಿಸಿದೆ. ಮುಂದಿನ 25 ವರ್ಷಗಳ ಅವಧಿಗೆ ವಿದ್ಯುತ್ ಭದ್ರತೆ ಒದಗಿಸಲು ಯೋಜನೆ ಸಿದ್ಧವಾಗಿದೆ. ರೈತರ ಜತೆಗೆ 10,000 ಎಕರೆಯಲ್ಲಿ ಸೌರ ಪಾರ್ಕ್ ಮಾಡಿದ್ದೇವೆ. ರೈತರು ಇನ್ನೂ 10,000 ಎಕರೆ ಕೊಡಲು ಮುಂದೆ ಬಂದಿದ್ದಾರೆ. ವಿದ್ಯುತ್ ಉತ್ಪಾದನೆ ಅತ್ಯುತ್ತಮವಾಗಿದೆ. ಪೀಕ್ ಅವರ್‌ನಲ್ಲಿ ವಿದ್ಯುತ್ ಮಾರಾಟವನ್ನು ಹೆಚ್ಚಿಸಿರುವುದರಿಂದ ಇಲಾಖೆಗೆ ಲಾಭವಾಗಿದೆ. ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯುವುದು ಮತ್ತು ದೀರ್ಘಾವಧಿ ಒಪ್ಪಂದಗಳ ಮೂಲಕ ವಿದ್ಯುತ್ ಖರೀದಿ ಮಾಡುವ ಮೂಲಕ ಇಂಧನ ಭದ್ರತೆಗೆ ಕ್ರಮ ವಹಿಸಲಾಗಿದೆ ಎಂದರು.

ಗೃಹಜ್ಯೋತಿ ಯೋಜನೆಯ ಮೂಲಕ 1.67 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡಿದ್ದೇವೆ. ಇದಕ್ಕಾಗಿ ಬಜೆಟ್‌ನಲ್ಲೇ ಅನುದಾನ ನೀಡಲಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಸಲು 21,000 ಕೋಟಿ ರೂ. ಅನುದಾನ ನೀಡುತ್ತಿದ್ದೇವೆ. ನಮ್ಮ ಅಧಿಕಾರಿಗಳು, ಇಂಜಿನಿಯರ್‌ಗಳು ಮತ್ತು ನೌಕರರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆ ಎದುರಾದರೆ ಶೀಘ್ರವೇ ಪರಿಹಾರ ನೀಡಲಿದ್ದಾರೆ ಎಂದು ಹೇಳಿದರು.

ಇಂಧನ ಇಲಾಖೆಯಲ್ಲಿ ಮೂಲಸೌಕರ್ಯ ಹೆಚ್ಚಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ. 120 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳು ಜಾರಿಯಾಗಲಿವೆ. ಆ ಮೂಲಕ ವಿದ್ಯುತ್ ಪೂರೈಕೆಯನ್ನು ಸಮರ್ಪಕಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಅಭಿನಂದನಾ ಕಾರ್ಯಕ್ರಮದಲ್ಲಿ ಸೆಸ್ಕ್ ಅಧ್ಯಕ್ಷ ರಮೇಶ್ ಬಂಡೀಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜಂಪೀರ್ ಖಾದ್ರಿ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಅರ್ಚನಾ ಎಂ.ಎಸ್., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯಕುಮಾರ್, ಒಕ್ಕೂಟದ ಅಧ್ಯಕ್ಷ ಕೆ. ಬಲರಾಮ್, ಕಾರ್ಯದರ್ಶಿ ಶಿವರಾಮ್, ಕೆಪಿಟಿಸಿಎಲ್ ಇಂಜಿನಿಯರ್‌ಗಳ ಸಂಘದ ಅಧ್ಯಕ್ಷ ಬಸವಣ್ಣ ಸಿ. ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಚಿತ ಕಣ್ಣಿನ ತಪಾಸಣೆ ಮತ್ತು ಯಲಬು ಕೀಳು, BP, ಶುಗರ ತಪಾಸಣೆ,  ಶಿಬಿರಹೋಂಸ್ಟೇನಲ್ಲಿ ಯುವತಿ ಸಾವು; ಸಂಜೀತ್ ಅಲಿ ಸಹವಾಸ ಮಾಡಿ ತಪ್ಪು ಮಾಡಿಬಿಟ್ಟೆ ಹೊಸ ಬದುಕು ಕಟ್ಟಿಕೊಳ್ತೀನಿ ಎಂದಿದ್ದ ಸುರಭಿಹಾವೇರಿಯ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬೊಮ್ಮಾಯಿರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್ಮುಂದಿನ ಮೂರು ವರ್ಷಗಳಲ್ಲಿ 100% ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿಬೀದರ್, ಕಲಬುರ್ಗಿ ಕುಡಿಯುವ ನೀರು ಯೋಜನೆ: ಜಲಶಕ್ತಿ ಸಚಿವರಿಗೆ ಖಂಡ್ರೆ ಮನವಿಕೇತನ್ ಹತ್ಯೆ ಬಳಿಕ ಲೋಹಗಡ ಕೋಟೆಗೆ ಮುಗಿಬಿದ್ದ ಜನ – ಕೊಲೆ ನಡೆದ ಸ್ಥಳಕ್ಕೆ ‘ಸಿಯಾ ಪಾಯಿಂಟ್’ ಹೆಸರು