ಹುಕ್ಕೇರಿ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಿಗೆ ರೈತರು ನೀರಾವರಿಗಾಗಿ ಆಗ್ರಹಿಸಿ ಪ್ರತಿಭಟನೆ ಕಳೆದ ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ ಸುತ್ತಮುತ್ತಲಿನ ಹಳ್ಳಿಗಳಿಂದ ರೈತರು ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಮೂರನೇ ದಿನವಾದ ಇವತ್ತು ಹುಕ್ಕೇರಿ ತಾಲೂಕಿನ ಅಂಗಡಿ ವ್ಯಾಪಾರಸ್ಥರು ಅಂಗಡಿಗಳನ್ನು ಬಂದ್ ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು ರೈತರು ರಸ್ತೆಗೆ ಇಳಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚೋನ್ನಪ್ಪ ಪೂಜಾರಿ ಮಾತನಾಡಿ ಈ ಭಾಗದ ಶಾಸಕರು ಮತ್ತು ಜಿಲ್ಲೆಯ ಉಸ್ತುವಾರಿ ಸಚಿವರು ಈ ನೀರಾವರಿಗಾಗಿ ಸರ್ಕಾರಕ್ಕೆ ಒತ್ತಾಯಿಸಿ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಅಗ್ರಹಿಸಿದರು
ಈ ಸಂದರ್ಭದಲ್ಲಿ ಚೋನ್ನಪ್ಪ ಪೂಜೆರಿ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷರು, ಆನಂದ್ ಗುರೂಜಿ , ಸಂಜೀವ್ ಹಾವನ್ನವರ್
ಹಾಗೂ ಸುತ್ತಮುತ್ತಲಿನ ತಾಲೂಕುಗಳ ಹಾಗೂ ಜಿಲ್ಲೆಗಳ ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿ ತಮ್ಮ ಬೆಂಬಲವನ್ನು ಸೂಚಿಸಿದರು



