LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾವೇರಿಯಲ್ಲಿ ಮಳೆರಾಯನ ಅವಕೃಪೆ – 11 ಎಕರೆಯಲ್ಲಿ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ನಾಶಪಡಿಸಿದ ರೈತ

Advertisement

ಹಾವೇರಿ: ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇರುವುದರಿಂದ ಬಿತ್ತನೆ ಮಾಡಿದ ಮೆಕ್ಕೆಜೋಳದ  ಬೀಜ ಮೊಳಕೆ ಒಡೆಯದೆ ಹಾಳಾಗಿದ್ದಕ್ಕೆ ಬೇಸತ್ತು ರೈತನೋರ್ವ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ಬೆಳೆಯನ್ನು ನಾಶಪಡಿಸಿದ್ದಾರೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದ ರೈತ ಕಿರಣ ಗಡಿಗೋಳ, ತನ್ನ ಸ್ವಂತ ಜಮೀನಿನ ಜೊತೆಗೆ ಬೇರೆ ರೈತರಿಂದ ಎಕರೆಗೆ ಹತ್ತು ಸಾವಿರ ರೂಪಾಯಿಯಂತೆ ಹನ್ನೊಂದು ಎಕರೆ ಜಮೀನನ್ನು ಲಾವಣಿ ಹಾಕಿಕೊಂಡು ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮೆಕ್ಕೆಜೋಳ ಬಿತ್ತನೆ ಬೀಜ, ಡಿಸೇಲ್ ಖರ್ಚು ಸೇರಿದಂತೆ ಬರೋಬ್ಬರಿ ಎರಡು ಲಕ್ಷ ರೂ. ಖರ್ಚು ಮಾಡಿದ್ದರು. ಆದರೆ ಬಿತ್ತನೆ ನಂತರ ವರುಣದೇವ ಕಣ್ತೆರೆಯಲಿಲ್ಲ. ರೈತರು ದಿನನಿತ್ಯ ಬಾರೋ ಬಾರೋ ಮಳೆರಾಯ ಅಂತಾ ಗೋಗರೆದರೂ ಮಳೆರಾಯ ರೈತರ ಮೇಲೆ ಕರುಣೆ ತೋರಲಿಲ್ಲ. ಹೀಗಾಗಿ ರೈತ ಕಿರಣ ಗಡಿಗೋಳ ಅವರು ಮಳೆಯಾಗದ್ದಕ್ಕೆ ಮೆಕ್ಕೆಜೋಳದ ಬೆಳೆ ಬರುವುದಿಲ್ಲ ಎಂಬುದನ್ನರಿತು ಟ್ರ‍್ಯಾಕ್ಟರ್‌ನಿಂದ ಹನ್ನೊಂದು ಎಕರೆಯಲ್ಲಿನ ಬೆಳೆ ನಾಶ ಮಾಡಿದ್ದಾರೆ. 

 

ಪ್ರಸಕ್ತ ವರ್ಷ ಮುಂಗಾರು ಉತ್ತಮವಾಗಿ ಆಗಬಹುದು ಎಂದು ಕಿರಣ ಅವರು ಹನ್ನೊಂದು ಎಕರೆ ಜಮೀನು ಲಾವಣಿಗೆ ಪಡೆದು ಕೃಷಿ ಮಾಡುತ್ತಿದ್ದರು. ಆದರೆ ಬಿತ್ತನೆ ನಂತರ ಮಳೆ ಬಾರದ್ದಕ್ಕೆ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಶೇಕಡಾ 30ರಷ್ಟು ಮಾತ್ರ ಬೆಳೆ ಬೆಳೆದಿತ್ತು. ಹೀಗಾಗಿ ಕಿರಣ ಅವರು ಬೆಳೆ ನಾಶ ಮಾಡಿದ್ದಾರೆ. ಇದು ಕೇವಲ ಒಬ್ಬ ರೈತರ ಕತೆಯಲ್ಲ, ಜಿಲ್ಲೆಯ ಬಹುತೇಕ ರೈತರ ಕತೆ ಇದೆ ಆಗಿದೆ. ಹೀಗಾಗಿ ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಪ್ರತಿ ಎಕರೆಗೆ 25,000 ರೂ.ನಂತೆ ಹಾನಿಗೆ ಒಳಗಾದ ರೈತರಿಗೆ ಪರಿಹಾರ ನೀಡಬೇಕು. ಇಡೀ ಹಾವೇರಿ ಜಿಲ್ಲೆಯನ್ನು ಬರಗಾಲ ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಕೆಂಡ್ ವಿಷನ್ ಕರ್ನಾಟಕ 2026 ಬೆಳಗಾವಿಯಲ್ಲಿ ಮೂರು ದಿನಗಳ ಬೃಹತ ಸಾರ್ವಜನಿಕ ಜಾಗೃತಿ ಅಭಿಯಾನ ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್‌ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟುಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ