LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವ

Advertisement
Advertisement
Advertisement

ರಾಯಚೂರು: ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ 7 ದಿನಕಾಲ ಗುರು ರಾಯರ 355ನೇ ಆರಾಧನಾ ಮಹೋತ್ಸವ  ಅದ್ಧೂರಿಯಾಗಿ ನಡೆಯಲಿದೆ ಅಂತ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ  ಮಾತನಾಡಿದ ಸುಬುಧೇಂದ್ರ ತೀರ್ಥ ಸ್ವಾಮಿಗಳು  ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದರು. ಆಗಸ್ಟ್ 29, 30, 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನ ರಾತ್ರಿ ವೇಳೆ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ ಪೂರ್ವಾರಾಧನೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಗುವುದು. ಸಂಜೆ ವೇಳೆ ಸಾಧಕರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಆಗಸ್ಟ್ 30ರಂದು ರಾಯರ ಮಧ್ಯಾರಾಧನೆ ಹಿನ್ನೆಲೆ ಸುವರ್ಣ ರಥೋತ್ಸವ ನಡೆಯುವುದು ಎಂದರು. 

ಆಗಸ್ಟ್ 31ರಂದು ರಾಯರ ಉತ್ತರಾರಾಧನೆ ಹಿನ್ನೆಲೆ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಲಿದ್ದು, ಈ ವೇಳೆ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪವೃಷ್ಟಿ ನೆರವೇರಿಸಲಾಗುವುದು. ಇನ್ನೂ ತುಂಗಭದ್ರಾ ನದಿಯಲ್ಲಿ ನೀರಿಲ್ಲದ ಹಿನ್ನೆಲೆ ಪುಣ್ಯ ಸ್ನಾನಕ್ಕೆ ಷವರ್ ವ್ಯವಸ್ಥೆ, ಭಕ್ತರಿಗಾಗಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆಗಳನ್ನ ಮಾಡಲಾಗುವುದು ಎಂದು ಹೇಳಿದರು. 

ಇನ್ನೂ ಭಕ್ತರು ದಾನಿಗಳ ನೆರವಿನಿಂದ ನಿರ್ಮಾಣವಾದ ಥೀಮ್ ಪಾರ್ಕ್, ಮುಖ್ಯರಸ್ತೆಯ ಕಾರಿಡಾರ್, ಎಸ್‌ಟಿಪಿಯನ್ನ ಆರಾಧನಾ ಮಹೋತ್ಸವ ಹಿನ್ನೆಲೆ ಲೋಕಾರ್ಪಣೆ ಮಾಡಲಾಗುವುದು ಎಂದು ಸುಬುಧೇಂದ್ರ ತೀರ್ಥ ಸ್ವಾಮಿಗಳು ತಿಳಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ ಕೇಸ್‌ – 6 ಮಂದಿ ಅರೆಸ್ಟ್‌ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ – ಎಫ್‌ಐಆರ್‌ ದಾಖಲುತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ“ದಲಿತರ 187 ಕೋಟಿ ಹಣವನ್ನು ನುಂಗಿದ ನಾಗೇಂದ್ರ ರಾಜೀನಾಮೆ ನೀಡಲೇಬೇಕು” – ವಿಧಾನಸೌಧ ಮುತ್ತಿಗೆ, ಬಿಜೆಪಿ ನಾಯಕರು ವಶH1N1 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಇಲಾಖೆ ಹೈ ಅಲರ್ಟ್, ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧSIR ಮೊದಲ ಮತದಾರರ ಕರಡು ಪಟ್ಟಿ ರಿಲೀಸ್‌; 1,07,96,339 ಮತದಾರರ ಹೆಸರು ಡಿಲೀಟ್‌ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆಸಮುದ್ರಕ್ಕೆ ಉರುಳಿದ ಕಾರು – ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಸಾವುಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವಆತಂಕರಿ ಗಿಡ ಮರಗಳು ಹಾಗೂ ರಂಬೆ ಕಾಂಬೆ ಕತ್ತರಿಸಲು ಯಂತ್ರ ಖರೀದಿ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ