ಹಾಸನ: ಹೊಳೆನರಸೀಪುರದ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ ಅವರು ಪೂಜೆ ವೇಳೆ ಕಣ್ಣೀರಿಟ್ಟಿದ್ದಾರೆ.
ಎರಡನೇ ಶ್ರಾವಣ ಶನಿವಾರದ ಹಿನ್ನೆಲೆ ರಂಗನಾಥಸ್ವಾಮಿ ದೇವಾಲಯಕ್ಕೆ ಭವಾನಿ ರೇವಣ್ಣ ಅವರು ಕುಟುಂಬಸ್ಥರ ಜೊತೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬದ ಸದಸ್ಯರ ಜೊತೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿದರು. ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ನೆರವೇರಿಸಿದರು. ಪೂಜೆ ವೇಳೆ ಅವರು ಕಣ್ಣೀರಿಟ್ಟರು.
ಜೈಲಲ್ಲಿರುವ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಅವರು ಕಂಬನಿ ಒರೆಸಿಕೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪೂಜೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಸೂರಜ್ ರೇವಣ್ಣ ಭಾಗಿಯಾಗಿದ್ದರು.




