LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ









ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್  ಜೈಲಿಗೆ ಸೇರಿ ಒಂದು ವರ್ಷ ಪೂರ್ಣಗೊಂಡಿದೆ. ಗೆಳತಿ ಪವಿತ್ರಾ ಗೌಡಗೆ  ಕೆಟ್ಟ ಪದ ಬಳಸಿದಾ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಕೊಲೆ ಆರೋಪ ಬಂದು 20 ತಿಂಗಳು ಆಗಿದೆ. ಆದರೆ, ಜೈಲು ಸೇರಿ ಒಟ್ಟು 365 ದಿನ ಕಳೆದಿದೆ.

ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದ ದರ್ಶನ್ 2024 ಅಕ್ಟೋಬರ್ 30ರ ತನಕ ಅಂದರೆ 131 ದಿನಗಳ ಕಾಲ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲೇ ಇದ್ದರು. ಇದಾದ ಬಳಿಕ ಜಾಮೀನು ಪಡೆದು ಹೊರ ಬಂದಿದ್ದರು. ಆದರೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ರದ್ದು ಆಗಿದ್ದಕ್ಕೆ ಮತ್ತೆ ಆರೋಪಿ ದರ್ಶನ್‌ನ ಬಂಧನವಾಗಿತ್ತು.

2025ರ ಆ.14ರಂದು ಮತ್ತೆ ಪರಪ್ಪನ ಅಗ್ರಹಾರ ಸೇರಿಕೊಂಡರು. ದಾಸ ಎರಡನೇ ಬಾರಿ ಬಂಧನಕ್ಕೆ ಒಳಗಾಗಿ 226 ದಿನ ಕಳೆದಿದೆ. ಡೆವಿಲ್ ಸಿನಿಮಾದ ರಿಲೀಸ್ ವೇಳೆ ತನ್ನ ಅಭಿಮಾನಿಗಳು ಸಿನಿಮಾ ಗೆಲ್ಲಿಸುವುದನ್ನು ಕಣ್ತುಂಬಿಕೊಳ್ಳಲು ಆಗದೆ ಜೈಲಿನಲ್ಲಿ ಕೊರಗಿದರು. ದರ್ಶನ್ ಹೊರ ಬರೋದಕ್ಕೆ ಕಾನೂನು ಹೋರಾಟ ನಡೆಯುತ್ತಿದ್ದು, ಜಾಮೀನು ದೊರೆಯುತ್ತದೆಯೋ ಇಲ್ಲವೋ ಕಾದು ನೋಡಬೇಕಿದೆ.‌


Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್