LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

Advertisement
Advertisement
Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 

ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದ.

ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜೊತೆ ಕಾನ್ಫರೇನ್ಸ್ ಕರೆ ಮಾಡಿ ಸಾಕ್ಷಿಗೆ ಬೆದರಿಕೆ ಹಾಕಿದ್ದು ಗೊತ್ತಾಗಿತ್ತು. ಬಳಿಕ ಗೌರವ್‌ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ.

ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಗೌರವ್ ಶೆಟ್ಟಿ, ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ