LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Advertisement

ನವದೆಹಲಿ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಶುಕ್ರವಾರ ತಡರಾತ್ರಿ ಸಮಸ್ಯೆ ಕಾಣಿಸಿಕೊಂಡಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನ ರಾತ್ರಿ ಸುಮಾರು 7.30ಕ್ಕೆ ಆಸ್ಪತ್ರೆಗೆ ಕರೆತರಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಮೇ ತಿಂಗಳಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಅಡ್ವಾಣಿ ಅವರು ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 7ರಂದು ನವದೆಹಲಿಯಲ್ಲಿರುವ ಎಲ್.ಕೆ. ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. 2001ರ ಅಕ್ಟೋಬರ್ 7ರಂದು ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಮೋದಿ, ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳನ್ನ ಪೂರೈಸಿದ ಹಿನ್ನೆಲೆ ಅಡ್ವಾಣಿ ಅವರನ್ನ ಭೇಟಿಯಾಗಿದ್ದರು. ಈ ಭೇಟಿಯ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರಧಾನಿ ಮೋದಿ, ಅಡ್ವಾಣಿ ಅವರ ದಶಕಗಳ ಸಾರ್ವಜನಿಕ ಸೇವೆ ಮತ್ತು ದೇಶದ ಪ್ರಗತಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದ್ದರು.

1999 ರಿಂದ 2004ರವರೆಗೆ ಕೇಂದ್ರ ಗೃಹ ಸಚಿವರಾಗಿದ್ದ ಅಡ್ವಾಣಿ
ಎಲ್.ಕೆ. ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ 1999 ರಿಂದ 2004ರ ವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, 2002 ರಿಂದ 2004 ರ ವರೆಗೆ ಭಾರತದ ಉಪ ಪ್ರಧಾನಿಯಾಗಿಯೂ ಕಾರ್ಯನಿರ್ವಹಿಸಿದ್ದರು.

1942ರಲ್ಲಿ ಆರ್‌ಎಸ್‌ಎಸ್‌ ಸೇರ್ಪಡೆ
1927ರ ನವೆಂಬರ್ 8ರಂದು ಇಂದಿನ ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದ ಎಲ್.ಕೆ ಅಡ್ವಾಣಿ ಅವರು 1942ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಸ್ವಯಂಸೇವಕರಾಗಿ ಸೇರ್ಪಡೆಯಾದರು. ನಂತರ ಭಾರತೀಯ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡ ಅವರು, ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ ಮೂರು ಅವಧಿಗಳಲ್ಲಿ ಕಾರ್ಯನಿರ್ವಹಿಸಿದ್ದರು. 1986 ರಿಂದ 1990ರ ವರೆಗೆ, 1993 ರಿಂದ 1998ರ ವರೆಗೆ ಹಾಗೂ 2004 ರಿಂದ 2005ರ ವರೆಗೆ ಪಕ್ಷದ ಅಧ್ಯಕ್ಷರಾಗಿದ್ದರು. 1980 ರಲ್ಲಿ ಬಿಜೆಪಿ ಸ್ಥಾಪನೆಯಾದ ಬಳಿಕ ಪಕ್ಷದ ಇತಿಹಾಸದಲ್ಲೇ ಅತಿ ಹೆಚ್ಚು ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಾಯಕರಲ್ಲಿ ಅವರು ಪ್ರಮುಖರಾಗಿದ್ದಾರೆ.

ದೇಶಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2024ರ ಮಾರ್ಚ್‌ನಲ್ಲಿ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ʻಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಗಾರತಿ ಮಾದರಿ ಕಾವೇರಿ ಮಾತೆಗೆ ಆರತಿ; ಪೂಜೆ ನೆರವೇರಿಸಿದ ಸಿಎಂ ಡಿಕೆಶಿಕ್ಷೇತ್ರ ಪುನರ್‌ವಿಂಗಡನೆ ಮಸೂದೆ ಮಂಡನೆಗೆ ಮುನ್ನ ಸರ್ವಪಕ್ಷ ಸಭೆ ನಡೆಸಿ – ಮೋದಿಗೆ 4ನೇ ಬಾರಿಗೆ ಖರ್ಗೆ ಪತ್ರಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ಭಿಕ್ಷಾಟನೆ ಕಾಟ; ಇಬ್ಬರ ಬಂಧನಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು3 ಲಕ್ಷ ಲಂಚ ಪಡೆಯುವಾಗ ʻಲೋಕಾʼ ದಾಳಿ – ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಎಸ್‌ಐಟಿ ತನಿಖೆಯಾಗಲಿ: ಪ್ರಹ್ಲಾದ್ ಜೋಶಿ ಆಗ್ರಹಪಿಜಿಸಿಇಟಿ ಫಲಿತಾಂಶ ಪ್ರಕಟ, ಶುಲ್ಕ ಕಟ್ಟಲು ಅ.19 ಕೊನೆ ದಿನ: ಕೆಇಎರಾಜ್ಯಕ್ಕೆ 2ನೇ ಮಹಿಳಾ ರಾಜ್ಯಪಾಲರ ನೇಮಕ – ಹೊಸ ಉತ್ಸಾಹದೊಂದಿಗೆ ಒಟ್ಟಾಗಿ ಕೆಲಸ ಮಾಡೋಣ: ಸಿಎಂಹಾವು ಕಚ್ಚಿ ಎರಡು ವರ್ಷದ ಮಗು ದುರ್ಮರಣನೆಲಮಂಗಲ ಹೆದ್ದಾರಿಯಲ್ಲಿ ಹಿಟ್‌ & ರನ್‌ಗೆ ಕೇರಳದ ಯುವತಿ ಬಲಿ