LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವರ್ ಡೌನ್ – ಪಡಿತರ ಸಿಗದೆ ಬೆಳಗಾವಿ ಜಿಲ್ಲೆಯಾದ್ಯಂತ ಕಾರ್ಡುದಾರರ ಪರದಾಟ

Advertisement
Advertisement
Advertisement

ಬೆಳಗಾವಿ: ಜಿಲ್ಲೆಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಸರ್ವರ್ ವೈಫಲ್ಯ ತಲೆದೋರಿದ್ದು, ನ್ಯಾಯಬೆಲೆ ಅಂಗಡಿಗಳ ಮುಂದೆ ಸಾರ್ವಜನಿಕರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.

ಪಡಿತರಪಡೆಯಲು ಇಂದು ಕೊನೆಯ ದಿನವಾಗಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಹಾಗೂ ಯರಗಟ್ಟಿ ತಾಲೂಕಿನ ಮುಗಳಿಹಾಳ ಸೇರಿದಂತೆ ಹಲವೆಡೆ ಕಾರ್ಡುದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸರ್ಕಾರ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಿದೆ. ಆದರೆ, ತಾಂತ್ರಿಕ ಅಡಚಣೆಯಿಂದಾಗಿ ಸರ್ವರ್(Server) ಸಂಪರ್ಕ ಅತ್ಯಂತ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯಂತ್ರದಲ್ಲಿ ಹೆಬ್ಬೆರಳಿನ ಗುರುತು ಸ್ವೀಕರಿಸುತ್ತಿಲ್ಲ.

ತಾಂತ್ರಿಕ ದೋಷದ ಕಾರಣ ಇಲ್ಲಿಯವರೆಗೆ ಶೇ. 50ರಷ್ಟು ಕಾರ್ಡುದಾರರಿಗೆ ಮಾತ್ರ ಪಡಿತರ ತಲುಪಿದೆ. ಉಳಿದ ಅರ್ಧದಷ್ಟು ಜನ ಕಳೆದ ನಾಲ್ಕೈದು ದಿನಗಳಿಂದ ದಿನಸಿ ಸಿಗದೆ ಅಂಗಡಿಗಳ ಸುತ್ತ ಅಲೆಯುತ್ತಿದ್ದಾರೆ. 

ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಅನಿವಾರ್ಯತೆಯಿಂದಾಗಿ ಕೂಲಿ ಕೆಲಸಕ್ಕೆ ಹೋಗಲಾಗದೆ ದಿನದ ಸಂಪಾದನೆಯನ್ನು ಕಳೆದುಕೊಳ್ಳುವಂತಾಗಿದೆ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

ಸರ್ವರ್ ಸಮಸ್ಯೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣವೇ ತಾಂತ್ರಿಕ ದೋಷ ಸರಿಪಡಿಸಿ ಎಲ್ಲರಿಗೂ ಸಮರ್ಪಕವಾಗಿ ಪಡಿತರ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ – ತಪ್ಪಿದ ಭಾರೀ ಅನಾಹುತಈಗ ಚುನಾವಣೆ ಎದುರಿಸಲು ಟನ್‌ಗಟ್ಟಲೆ ಹಣ ಬೇಕು: ಸಿದ್ದರಾಮಯ್ಯಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ದುರ್ಮರಣಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನKPSC ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ: ಹೆಚ್‌ಡಿಕೆಪ್ರಮೋಷನ್ ನೀಡುವುದಾಗಿ 50 ಸಾವಿರ ರೂ. ಲಂಚ – ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆಜೈಲಿನೊಳಗೆ ಕೈದಿಗಳ ನಡುವೆ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿ ಮೇಲೆಯೇ ಹಲ್ಲೆಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ನನ್ನು ಕೆಪಿಎಸ್‌ಸಿಗೆ ನೇಮಕ ಮಾಡಿದ್ದು ಬಿಜೆಪಿ: ಬಿಕೆ ಹರಿಪ್ರಸಾದ್ಸರ್ವರ್ ಡೌನ್ – ಪಡಿತರ ಸಿಗದೆ ಬೆಳಗಾವಿ ಜಿಲ್ಲೆಯಾದ್ಯಂತ ಕಾರ್ಡುದಾರರ ಪರದಾಟಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು, ಯುವಕನ ಸ್ಥಿತಿ ಗಂಭೀರ