LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

Advertisement
Advertisement

ಬೀದರ್: ಸಂಪುಟ ವಿಸ್ತರಣೆಯ ಬಗ್ಗೆ ಸಿದ್ದರಾಮಯ್ಯ  ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಕೆಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಆಗ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡುವುದು ಸಹಜ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಬೀದರ್‌ನಲ್ಲಿ ಮಾತನಾಡಿದ ಅವರು, ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಆ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ. ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ ಅವಕಾಶ ನೀಡುವ ಪ್ರಯತ್ನ ಮಾಡಲಾಗುತ್ತದೆ. ಹೀಗಾಗಿ ಕೆಲವರನ್ನು ಕೈಬಿಡಬೇಕಾಗುತ್ತದೆ. ಅದರಿಂದ ಸಣ್ಣಪುಟ್ಟ ಅಸಮಾಧಾನ ಆಗುವುದು ಸಹಜ ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದ ವಿಚಾರವಾಗಿ ಮಾತನಾಡಿದ ಯತೀಂದ್ರ, ಮಹಿಳೆಯರಿಗೂ ಒಂದು ಸಚಿವ ಸ್ಥಾನ ನೀಡಲಾಗುತ್ತದೆ. ಕೊನೆಯ ಕ್ಷಣದಲ್ಲಿ ಒಂದು ಸ್ಥಾನವನ್ನು ಖಾಲಿ ಇಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಗಾಯತ್ರಿ ಶಾಂತೇಗೌಡ ಅವರು ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ಹೆಸರನ್ನು ಪಟ್ಟಿಯಿಂದ ಯಾಕೆ ಕೈಬಿಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಮಾತ್ರ ಹೇಳಿದ್ದಾರೆ. ಕುರುಬ ಸಮುದಾಯದ ಇಬ್ಬರಿಗೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.ಇದನ್ನು

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಗದಿರಬಹುದು. ಆದರೆ, ಅವರಿಗೆ ನೀಡಲು ಇನ್ನೂ ಹಲವು ನಿಗಮ-ಮಂಡಳಿ ಸೇರಿದಂತೆ ವಿವಿಧ ಸ್ಥಾನಮಾನಗಳಿವೆ. ಇರುವ 34 ಸಚಿವ ಸ್ಥಾನಗಳಲ್ಲೇ ಸಮುದಾಯ, ಪ್ರಾದೇಶಿಕ ಸಮತೋಲನ ಹಾಗೂ ಹೊಸಬರಿಗೂ ಅವಕಾಶ ಕಲ್ಪಿಸಬೇಕಾಗುತ್ತದೆ ಎಂದು ಹೇಳಿದರು.

ಯಾವ ಸರ್ಕಾರಕ್ಕೂ ಶೇ.100ರಷ್ಟು ಪ್ರಾತಿನಿಧ್ಯ ನೀಡಲು ಸಾಧ್ಯವಿಲ್ಲ. ಕೆಲವರನ್ನು ಕೈಬಿಡಲೇಬೇಕಾಗುತ್ತದೆ. ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾದರೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹೊಡೆತ ಬೀಳುವುದಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ಎನ್‌ವೈ ಗೋಪಾಲಕೃಷ್ಣಗೆ ತಪ್ಪಿದ ಮಂತ್ರಿಗಿರಿ – ಟೈರಿಗೆ ಬೆಂಕಿಯಿಟ್ಟು ಬೆಂಬಲಿಗರ ಆಕ್ರೋಶನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ: ಪ್ರದೀಪ್ ಈಶ್ವರ್ಖಾಲಿ ಇರೋ ಮಹಿಳಾ ಸಚಿವ ಸ್ಥಾನ ಆದಷ್ಟು ಬೇಗ ಭರ್ತಿ: ಪ್ರಿಯಾಂಕ್ ಖರ್ಗೆಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – KSRTC ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ – ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರುಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌ಕೇಂದ್ರ ಸರ್ಕಾರ ಟ್ರಂಪ್‌ ಮುಂದೆ ಮಂಡಿಯೂರಿದೆ – E20 ಇಂಧನ ವಿರೋಧಿಸಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಭಟನೆದುರಹಂಕಾರವೇ ವಿನಾಶಕ್ಕೆ ದಾರಿ – ಪುತ್ರ ಉದಯನಿಧಿ ರಿಲೀಸ್‌ ಬಳಿಕ ಟಿವಿಕೆ ವಿರುದ್ಧ ಎಂ.ಕೆ ಸ್ಟಾಲಿನ್‌ ಗುಡುಗುಕಾರು ಅಪಘಾತದಲ್ಲಿ ಯುವತಿ ಸಾವು – ಬರ್ತ್‌ಡೇ ಆಚರಣೆಗೆ ಕರೆದು ರೇಪ್‌ಗೆ ಯತ್ನಿಸಿ ಕೊಲೆ ಆರೋಪ