LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಎಸ್‌ಐಟಿ ತನಿಖೆಯಾಗಲಿ: ಪ್ರಹ್ಲಾದ್ ಜೋಶಿ ಆಗ್ರಹ

Advertisement

ಗದಗ: ಸ್ಟಿಂಗ್ ಆಪರೇಷನ್ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಎಸ್‌ಐಟಿ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಅಭಿವೃದ್ಧಿ ಭಾಗ್ಯಕ್ಕಿಂತ ಡ್ರಾಮಾ ಭಾಗ್ಯವೇ ಹೆಚ್ಚಾಗಿದೆ. ಎಲ್ಲವನ್ನೂ ಮರೆಮಾಚಲು ಸ್ಟಿಂಗ್ ಆಪರೇಷನ್ ವಿಚಾರ ಮುನ್ನೆಲೆಗೆ ಬಂದಿದೆ ಎಂದು ಟೀಕಿಸಿದರು. ಯಾರು ಶೂಟಿಂಗ್ ಮಾಡಿಸಿದರು, ಯಾರು ಸ್ಟಿಂಗ್ ಆಪರೇಷನ್ ನಡೆಸಿದರು ಎಂಬ ಚರ್ಚೆಗಿಂತ ಪ್ರಕರಣದ ಸತ್ಯ ಹೊರಬರುವುದು ಮುಖ್ಯ ಎಂದರು.

ಸಿದ್ದರಾಮಯ್ಯ ಹಿರಿಯ ನಾಯಕರು. ಹೀಗಾಗಿ ಈ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು. ಆರೋಪಗಳು ಸುಳ್ಳು ಎಂದು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ಇದೇ ವೇಳೆ, ಸಚಿವರನ್ನು ಟ್ರ್ಯಾಪ್ ಮಾಡಬಹುದು ಎಂಬ ಎಚ್ಚರಿಕೆ ವಿಚಾರವನ್ನೂ ಪ್ರಸ್ತಾಪಿಸಿದ ಜೋಶಿ, ತಪ್ಪು ಮಾಡದವರಿಗೆ ಭಯವೇಕೆ ಎಂದು ಪ್ರಶ್ನಿಸಿದರು. ಸರ್ಕಾರಿ ಸಾರಿಗೆ ಬಸ್‌ಗಳಿಗೆ ಸ್ಟೆಪನಿ ಇಲ್ಲದಿರುವುದನ್ನು ಉಲ್ಲೇಖಿಸಿ, ಸರ್ಕಾರದೊಳಗಿನ ಸ್ಟೆಪನಿ ವಿಚಾರದ ಬಗ್ಗೆ ಮಾತನಾಡುವ ಮೂಲಕ ವ್ಯಂಗ್ಯವಾಡಿದರು.

ಕಬ್ಬು ಬೆಳೆಗಾರರ ಸಮಸ್ಯೆ: ರೈತರು ಸಮಿತಿ ಜೊತೆ ಚರ್ಚಿಸಲಿ
ಕಬ್ಬು ಬೆಳೆಗಾರರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಸಮಿತಿ ರಚಿಸಲಾಗಿದೆ. ರೈತರು ಹೋರಾಟ ಬಿಟ್ಟು ಕೆಲಸಕ್ಕೆ ಮರಳಬೇಕು. ಸಮಿತಿ ಎಲ್ಲ ವಿಷಯಗಳನ್ನು ಪರಿಶೀಲಿಸಲಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಎಥನಾಲ್ ಉತ್ಪಾದನೆ ಮತ್ತು ಖರೀದಿಯಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಎಥನಾಲ್ ಖರೀದಿಯಿಂದ ರೈತರಿಗೆ ನಿಯಮಿತವಾಗಿ ಹಣ ಪಾವತಿಯಾಗಲು ಅನುಕೂಲವಾಗಿದೆ. ಹಿಂದೆ ಬಿಲ್ ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಹೋರಾಟಗಳು ನಡೆಯುತ್ತಿದ್ದವು ಎಂದು ತಿಳಿಸಿದರು.

ಹಿಂದೆ ಶೇ.1.5ರಷ್ಟು ಎಥನಾಲ್ ಮಿಶ್ರಣವಾಗುತ್ತಿತ್ತು. ಆಗ 38 ಕೋಟಿ ಲೀಟರ್ ಎಥನಾಲ್ ಖರೀದಿಯಾಗುತ್ತಿತ್ತು. ಈಗ ದೇಶಾದ್ಯಂತ 1,200 ಕೋಟಿ ಲೀಟರ್ ಖರೀದಿಯಾಗುತ್ತಿದೆ ಎಂದು ಜೋಶಿ ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಜೋಶಿ ಟೀಕೆ
ರಾಜ್ಯ ಸರ್ಕಾರ ಜಿಎಸ್‌ಟಿ ಆದಾಯ ಪಡೆಯುತ್ತಿದ್ದರೂ ಕಬ್ಬು ಬೆಳೆಗಾರರಿಗೆ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನೀಡುತ್ತಿಲ್ಲ ಎಂದು ಜೋಶಿ ಆರೋಪಿಸಿದರು. ಕಬ್ಬಿನ ತೂಕದಲ್ಲಿ ಆಗುವ ಮೋಸ ತಡೆಯಲು ಕೂಡ ಸರ್ಕಾರ ಮುಂದಾಗುತ್ತಿಲ್ಲ ಎಂದು ದೂರಿದರು.

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ರೈತರಿಗೆ ಬೆಂಬಲ ನೀಡಲಾಗಿದೆ. ಸ್ಥಳೀಯ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದ್ದರೂ ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. 

ಮಹಾರಾಷ್ಟ್ರದಲ್ಲಿ ಇಂತಹ ಸಮಸ್ಯೆ ಇಲ್ಲ, ಕರ್ನಾಟಕದಲ್ಲಿ ಮಾತ್ರ ಸಮಸ್ಯೆ ಎದುರಾಗಿದೆ. ಇದು ರಾಜ್ಯ ಸರ್ಕಾರದ ವೈಫಲ್ಯ ಎಂದು ಆರೋಪಿಸಿದ ಅವರು, ರೈತರ ಸಮಸ್ಯೆಗಳನ್ನು ಕಡೆಗಣಿಸುವ ಉದ್ದೇಶದಿಂದ ಸಮಿತಿ ರಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಹೋರಾಟ ನಡೆಸುತ್ತಿರುವ ರೈತರ ಬಗ್ಗೆ ನಮಗೆ ಯಾವುದೇ ಅಸಡ್ಡೆ ಇಲ್ಲ. ರೈತರು ಹೋರಾಟ ಬಿಟ್ಟು ಸಮಿತಿಯೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಗಾರತಿ ಮಾದರಿ ಕಾವೇರಿ ಮಾತೆಗೆ ಆರತಿ; ಪೂಜೆ ನೆರವೇರಿಸಿದ ಸಿಎಂ ಡಿಕೆಶಿಕ್ಷೇತ್ರ ಪುನರ್‌ವಿಂಗಡನೆ ಮಸೂದೆ ಮಂಡನೆಗೆ ಮುನ್ನ ಸರ್ವಪಕ್ಷ ಸಭೆ ನಡೆಸಿ – ಮೋದಿಗೆ 4ನೇ ಬಾರಿಗೆ ಖರ್ಗೆ ಪತ್ರಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ಭಿಕ್ಷಾಟನೆ ಕಾಟ; ಇಬ್ಬರ ಬಂಧನಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು3 ಲಕ್ಷ ಲಂಚ ಪಡೆಯುವಾಗ ʻಲೋಕಾʼ ದಾಳಿ – ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಎಸ್‌ಐಟಿ ತನಿಖೆಯಾಗಲಿ: ಪ್ರಹ್ಲಾದ್ ಜೋಶಿ ಆಗ್ರಹಪಿಜಿಸಿಇಟಿ ಫಲಿತಾಂಶ ಪ್ರಕಟ, ಶುಲ್ಕ ಕಟ್ಟಲು ಅ.19 ಕೊನೆ ದಿನ: ಕೆಇಎರಾಜ್ಯಕ್ಕೆ 2ನೇ ಮಹಿಳಾ ರಾಜ್ಯಪಾಲರ ನೇಮಕ – ಹೊಸ ಉತ್ಸಾಹದೊಂದಿಗೆ ಒಟ್ಟಾಗಿ ಕೆಲಸ ಮಾಡೋಣ: ಸಿಎಂಹಾವು ಕಚ್ಚಿ ಎರಡು ವರ್ಷದ ಮಗು ದುರ್ಮರಣನೆಲಮಂಗಲ ಹೆದ್ದಾರಿಯಲ್ಲಿ ಹಿಟ್‌ & ರನ್‌ಗೆ ಕೇರಳದ ಯುವತಿ ಬಲಿ