LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – KSRTC ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ

Advertisement
Advertisement

ತುಮಕೂರು: ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್  ಬೇಸರ ವ್ಯಕ್ತಪಡಿಸಿದ್ದು, ಕೆಎಸ್‌ಆರ್‌ಟಿಸಿ  ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಜನ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳುತ್ತಾರೆ. ಆದರೆ ಯಾರು ಹೇಳಬೆಕಿತ್ತೋ ಅವರು ಹೇಳಿಲ್ಲ. ರಾಜಕೀಯದಲ್ಲಿ ನಮ್ಮಂಥ ಸಾಮಾನ್ಯ ರೈತರ ಮಗ ಮೇಲೆ ಬರೋದು ಕಷ್ಟ. ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರದ ನುಡಿಗಳನ್ನಾಡಿದ್ದಾರೆ. .

ರಾಜಕೀಯದ ಹೊಸ ಪಾಠ ಈಗ ಅರ್ಥ ಆಗುತ್ತಿದೆ. ಗುರುತಿಸುತ್ತಾರೆ ಎಂದು ಅಂದುಕೊAಡಿದ್ದೆ. ಈಗ ಎಲ್ಲವೂ ಮೀರಿ ಹೋಗಿದೆ. ಪ್ರಾಮಾಣಿಕತೆಗೆ ಬೆಲೆ ಎಷ್ಟಿದೆ ಅನ್ನೋದು ಈಗ ಜಿಜ್ಞಾಸೆಗೆ ಒಳಪಡಿಸಿದ್ದೇನೆ. ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ. ಅವಕಾಶ ಸಿಗತ್ತೆ ಅಂದುಕೊಂಡಿದ್ದೆ. ಈಗ ಅವಕಾಶ ವಂಚಿತನಾಗಿದ್ದೇನೆ. ನಮ್ಮ ಜಿಲ್ಲೆಗೆ ಇನ್ನೊಂದು ಸ್ಥಾನ ಕೊಡಬಹುದಿತ್ತು. ಬಡವನ ಕೋಪ ದವಡೆಗೆ ಮೂಲ. ಇನ್ನೂ ಒಂದೂವರೆ ವರ್ಷ ಸಮಯ ಇದೆ. ಕಾರ್ಯಕರ್ತರು ಏನು ತೀರ್ಮಾನ ಮಾಡುತ್ತಾರೋ ನೋಡೋಣ. ನಾನೂ ನಿಗಮ ಮಂಡಳಿಗೆ ರಾಜೀನಾಮೆ ಕೊಡುತ್ತೇನೆ. ಕೆಎಸ್‌ಆರ್‌ಟಿಸಿ ನಷ್ಟದಲ್ಲಿ ಇದೆ. ಏನೂ ಸಾಧನೆ ಮಾಡಲು ಆಗಲ್ಲ. ಹಾಗಾಗಿ ನಾನು ನಾಳೆ ಹೋಗಿ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ಎನ್‌ವೈ ಗೋಪಾಲಕೃಷ್ಣಗೆ ತಪ್ಪಿದ ಮಂತ್ರಿಗಿರಿ – ಟೈರಿಗೆ ಬೆಂಕಿಯಿಟ್ಟು ಬೆಂಬಲಿಗರ ಆಕ್ರೋಶನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ: ಪ್ರದೀಪ್ ಈಶ್ವರ್ಖಾಲಿ ಇರೋ ಮಹಿಳಾ ಸಚಿವ ಸ್ಥಾನ ಆದಷ್ಟು ಬೇಗ ಭರ್ತಿ: ಪ್ರಿಯಾಂಕ್ ಖರ್ಗೆಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – KSRTC ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ – ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರುಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌ಕೇಂದ್ರ ಸರ್ಕಾರ ಟ್ರಂಪ್‌ ಮುಂದೆ ಮಂಡಿಯೂರಿದೆ – E20 ಇಂಧನ ವಿರೋಧಿಸಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಭಟನೆದುರಹಂಕಾರವೇ ವಿನಾಶಕ್ಕೆ ದಾರಿ – ಪುತ್ರ ಉದಯನಿಧಿ ರಿಲೀಸ್‌ ಬಳಿಕ ಟಿವಿಕೆ ವಿರುದ್ಧ ಎಂ.ಕೆ ಸ್ಟಾಲಿನ್‌ ಗುಡುಗುಕಾರು ಅಪಘಾತದಲ್ಲಿ ಯುವತಿ ಸಾವು – ಬರ್ತ್‌ಡೇ ಆಚರಣೆಗೆ ಕರೆದು ರೇಪ್‌ಗೆ ಯತ್ನಿಸಿ ಕೊಲೆ ಆರೋಪ