LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ.

ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. 

ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ ಅಹಮದ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಶವಾಗಾರ ಕೋಣೆಯ ಅಟೆಂಡರ್ ಮುನೀರ್ ಅಹ್ಮದ್ ಎಂಬಾತನಿಂದ ಈ ಹೀನ ಕೃತ್ಯವಾಗಿದೆ. 

 

ಪಿಎಂಇ ಮಾಡುವ ಕಾಲಕ್ಕೆ ಅನುಮತಿ ಇಲ್ಲದೇ ತನ್ನ ಮೊಬೈಲ್‌ನಲ್ಲಿ ಮುನ್ನಿರ್ ಸತ್ತ ಮಹಿಳೆಯರ ಶವದ ಮೇಲಿನ ಬಟ್ಟೆ ತೆಗೆದು ಫೋಟೋ ತೆಗೆದುಕೊಳ್ತಿದ್ದನಂತ್ತೆ. ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿಕೊಂಡು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನಂತೆ ಆರೋಪಿ ಮುನೀರ್.

ಕೃತ್ಯದಿಂದ ಮಹಿಳೆಯರ ಘನತೆ, ಕುಟುಂಬಸ್ಥರ ಗೌರವ, ವೈದ್ಯಕೀಯ ಗೌಪ್ಯತೆಗೆ ಧಕ್ಕೆಯಾಗಿದೆ. ಸದ್ಯ ಆರೋಪಿ ಮುನೀರ್‌ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 301, 62 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೇಸ್​ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರುಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿಡಿಕೆಶಿ ಅವಧಿಯಲ್ಲಾದರೂ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್